ಪೋಸ್ಟ್‌ಗಳು

ಅಕ್ಟೋಬರ್ 9, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅಮೆರಿಕಾದಲ್ಲಿ ಸಿಡಿದೆದ್ದ ಬಂಡಾಯ- ಒಂದು ಆಶಾಭಾವನೆ!

ಇಮೇಜ್
ಹಲವಾರು ದಿನಗಳಿಂದ ನನಗೆ ಒಂದು ಬಯಕೆಯಿತ್ತು . ಅದೇನೆಂದರೆ ಅಮೆರಿಕವೇ ಅಮೆರಿಕದ ವಿರುದ್ದ ಬಂಡೆದ್ದು ನಿಲ್ಲಬೇಕು ಎನ್ನುವ ಬಯಕೆ ಅದು . ಕಳೆದ ಸೆಪ್ಟೆಂಬರ್ ೧೭ರಿಂದ ಅಮೆರಿಕದಲ್ಲಿ ನಡೆಯುತ್ತಿರುವ ಘಟನಾವಳಿಗಳನ್ನು ನೋಡಿ ಕೊಂಚ ಥ್ರಿಲ್ ಆಗುತ್ತಿದೆ . ಜಗತ್ತಿನೆಲ್ಲೆಡೆ ನಡೆಯುತ್ತಿರುವ ಜನಾಂದೋಲನಗಳ ಸಾಲಿನಲ್ಲಿ ಈಗ ಅಮೆರಿಕದ ಜನರೂ ಹೊಸ ಹೆಜ್ಜೆ ಇಟ್ಟಿರುವುದು ನೋಡಿ ಖುಷಿಯಾಗಿದೆ . ಈ ಬಂಡಾಯ ಎಲ್ಲಿಯವರಗೆ ನಡೆಯುತ್ತದೆ , ಏನು ಸಾಧಿಸುತ್ತದೆ , ಯಾವುದೂ ಖಾತ್ರಿಯಿಲ್ಲ . ಆದರೆ ಜಗತ್ತಿನ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯೂ ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕಾದ ಚಳವಳಿ ಇದು ಎಂದು ಮಾತ್ರ ಹೇಳಬಹುದು . ಇದಕ್ಕೆ ಕಾರಣಗಳನ್ನು ಸ್ವಲ್ಪ ವಿವರವಾಗಿ ಗಮನಿಸುವ ಮುನ್ನ ಇಲ್ಲಿ ಏನೇನಾಗುತ್ತಿದೆ ಎಂದು ನೋಡೋಣ .   ನಿಜಕ್ಕೂ ಅಚ್ಚರಿಯ ಹಾಗೂ ಬೇಸರದ ಸಂಗತಿಯಿಂದರೆ ಅಲ್ಲಿ ನಡೆಯುತ್ತಿರುವ ಇಂತಹ ಒಂದು ಅದ್ಭುತ ಬೆಳವಣಿಗೆಗ ನಮ್ಮ ಮಾಧ್ಯಮಗಳ ಪ್ರತಿಕ್ರಿಯೆ ಏನೂ ಇಲ್ಲವೆನ್ನುವಷ್ಟರ ಮಟ್ಟಿಗಿರುವುದು . ಇದು ಮಾಧ್ಯಮಗಳ ಜಾಣಮೌನವಾ ? ಇದು ಇಲ್ಲಿನ ಮಾಧ್ಯಮಗಳ ಪರಿಸ್ಥಿತಿ ಮಾತ್ರವಲ್ಲ . ಅಮೆರಿಕದ ಮುಖ್ಯವಾಹಿನಿ ಮಾಧ್ಯಮಗಳೂ ಬೇಕೆಂದೇ ಈ ಚಳವಳಿಯ ಕುರಿತು ಉಪೇಕ್ಷೆಯನ್ನೂ ಹಾಗೂ ಅಪಪ್ರಚಾರವನ್ನೂ ನಡೆಸುತ್ತಿವೆ . ಈಜಿಪ್ಟಿನ , ಲಿಬಿಯಾದ...