ಪೋಸ್ಟ್‌ಗಳು

ಮಾರ್ಚ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸರ್ಕಾರಿ ವಿಜ್ಞಾನ ಕಾಲೇಜಿನ ಯಶೋಗಾಥೆ

ಇಮೇಜ್
' ಮನಸ್ಸಿದ್ದರೆ ಮಾರ್ಗ’ ಎಂಬ ಹಳೆಯ ನಾಣ್ಣುಡಿಗೆ ನಾಡಿನ ಶಿಕ್ಷಣ ಕ್ಷೇತ್ರದಲ್ಲಿ ಸಿಗುವ ಇತ್ತೀಚಿನ ಉದಾಹರಣೆ ಎಂದರೆ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜು.  ಈ  ಕಾಲೇಜು  ಹತ್ತು ವರ್ಷಗಳಲ್ಲಿ  ಹೇಗೆ ಬದಲಾವಣೆ ಸಾಧಿಸಿತು ಎಂಬುದ ರ    ವರದಿ . ದ ಸಂಡೆ ಇಂಡಿಯನ್ ಪತ್ರಿಕೆ ಗಾಗಿ . .        ಖಾಸಗೀಕರಣದ ಈ ಯುಗದಲ್ಲಿ ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ಎನ್ನುವುದು ಬಡ -ಮಧ್ಯಮ ಹಿನ್ನೆಲೆಯ ವಿದಾರ್ಥಿಗಳ ಪಾಲಿಗೆ ಗಗನ ಕುಸುಮವೇ ಆಗಿರುವಾಗ , ಯೂನಿವರ್ಸಿಟಿಗಳು ತಮ್ಮನ್ನುಳಿಸಿಕೊಳ್ಳಲು ಪರದಾಡುತ್ತಿರುವ ಈ ದಿನಗಳಲ್ಲೂ ಒಂದಷ್ಟು ಮಂದಿ ಪ್ರಾಧ್ಯಾಪಕರು ವಿಭಿನ್ನವಾಗಿ ಚಿಂತಿಸಿ , ಶ್ರದ್ಧೆಯಿಂದ ದುಡಿದರೆ ಅದ್ಭುತವನ್ನೇ ಸಾಧಿಸಬಹುದು ಎಂಬುದಕ್ಕೆ ಜೀವಂತ ಉದಾಹರಣೆ ಎಂದರೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು. 91 ವರ್ಷಗಳ ಇತಿಹಾಸ ಇರುವ ಈ ಕಾಲೇಜು ಹಿಂದೆ ’ ಗ್ಯಾಸ್ ಕಾಲೇಜಿನ (ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು) ಭಾಗವಾಗಿದ್ದು 1972ರಲ್ಲಿ ಕೇವಲ ವಿಜ್ಞಾನ ಕಾಲೇಜಾಗಿ ಪ್ರತ್ಯೇಕಗೊಂಡಿತ್ತು.  1997- 1998ರ ವರೆಗೂ ರಾಜ್ಯದ ಎಲ್ಲಾ ಸರ್ಕಾರಿ ಕಾಲೇಜುಗಳ ರೀತಿಯಲ್ಲಿಯೇ ಇದೂ ಕೂಡಾ ಕ್ಷಯ ರೋಗ ಬಡಿದ ಕೃಶವಾದ ರೋಗಿಯಂತೆಯೇ ಇತ್ತು. ಒಂದಿದ್ದರೆ ಮತ್ತೊಂದಿರಲಿಲ್ಲ. ವಿಜ್ಞಾನದ ಪ್ರಯೋಗಾಲಯಗಳು ಪುರಾತನ ಕಾಲದ ವಸ್ತು ಸ...

ಮತ್ತೆ ಕಾಡಿದ ರಶೋಮನ್

ಇಮೇಜ್
ಕಳೆದ ಮಾರ್ಚ್ ೨ ರಂದು ನಡೆದ  ಬೆಂಗಳೂರಿನಲ್ಲಿ ನಡೆದ ವಕೀಲರು - ಪತ್ರಕರ್ತರು - ಪೊಲೀಸರ ನಡುವಿನ ವೃತ್ತಿಗಲಭೆ ನಿಧಾನಕ್ಕೆ ಜನಮಾನಸದಿಂದ  ದೂರಾಗತೊಡಗಿದೆ. ಅಂದು ಮೂರೂ ಕಡೆಯವರಿಗೆ ಉಂಟಾದ ದೇಹದ ಮೇಲಿನ ಗಾಯಗಳೂ ವಾಸಿಯಾಗುತ್ತಿವೆ. ತಲೆಗೆ ಹಾಕಿದ್ದ ಹೊಲಿಗೆಗಳೂ ಬಿಚ್ಚಲಾಗಿದೆ. ಆದರೆ ಅಂದು ಉಂಟಾದ ಮಾನಸಿಕ ಗಾಯಗಳು ಇನ್ನು ಹತ್ತು ವರ್ಷಗಳಾದರೂ ವಾಸಿಯಾಗಲಾರವು. ಸಮಾಜದಲ್ಲಿ ಅತ್ಯಂತ ಜವಾಬ್ದಾರಿ ಹೊಂದಿದ್ದ ಈ ವೃತ್ತಿಪರರ ನಡುವಿನ ಕಂದಕ ದಿನೇ ದಿನೇ ಬೆಳೆಯುತ್ತಲೇ ಹೋಗುತ್ತಿದೆ. ಅಂದಿನ ಘಟನೆ ಹೇಗೆ ನಡೆಯಿತೆಂದು ನೀವು ಪತ್ರಕರ್ತರಿಗೆ ಕೇಳಿದರೆ ಅವರು ಒಂದು ರೀತಿ ಮಾಧ್ಯಮಗಳ ಮೂಲಕ ಭಿತ್ತರಿಸಿದ್ದಾರೆ.  ವಕೀಲರು ತಮ್ಮ ಅಳಲನ್ನು ತಮ್ಮದೇ ರೀತಿ ಹೇಳುವ ಪ್ರಯತ್ನ ನಡೆಸಿದ್ದಾರೆ. ಪೊಲೀಸರು ಕೂಡಾ ಮತ್ತೊಂದು ಬಗೆಯಲ್ಲಿ ಹೇಳುತ್ತಾರೆ. ಈ ಹೊತ್ತಿನಲ್ಲಿ ನನಗೆ ಮತ್ತೊಮ್ಮೆ ಕಾಡಿದ್ದು ಜಗತ್ಪ್ರಸಿದ್ಧ ನಿರ್ದೇಶಕ ಅಕಿರಾ ಕೊರೊಸಾವಾನ ರಶೋಮನ್ (೧೯೫೦ರಲ್ಲಿ ನಿರ್ಮಿಸಿದ್ದು) ಎಂಬ ಅದ್ಭುತ ಸಿನೆಮಾ. ಈ ಸಿನೆಮಾ ನೋಡಿರುವವರಿಗೆಲ್ಲಾ ನನ್ನ ಮಾತು ಅರ್ಥವಾಗಿರುತ್ತದೆ. ಕೊರೊಸಾವಾನ ಎಲ್ಲಾ ಸಿನಿಮಾಗಳಲ್ಲಿ ಬಹಳ ಸಲ ಮತ್ತೆ ಮತ್ತೆ ಕಾಡುವುದು ರಷೊಮನ್. ಯಾಕೆಂದರೆ ಮನುಷ್ಯನ ಸ್ವಾರ್ಥ ಮತ್ತು ಆಲೋಚನೆಯ ಮಿತಿಗಳನ್ನು ಆ ಸಿನೆಮಾದ ಕತೆ ಅನಾವರಣ ಮಾಡುವಷ್ಟು ಅದ್ಭುತವಾಗಿ ಬೇರೆ ಯಾವುದೂ ಮಾಡಲು ಅಸಾಧ್ಯವೆಂದು ನನ್ನ ಭಾವನೆ.  ರಶೋಮನ್ ...