ಪೋಸ್ಟ್‌ಗಳು

ಜೂನ್ 9, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

"ಸಹಪಂಕ್ತಿ ಭೋಜನದಿಂದಲೇ ಜಾತಿ ಸಾಮರಸ್ಯ ಸಾಧ್ಯ" : ಪ್ರೊ. ಬಿ. ವಿ. ವೀರಭದ್ರಪ್ಪ

ಇಮೇಜ್
ಪ್ರೊ.ಬಿ.ವಿ.ವೀರಭದ್ರಪ್ಪನವರು ಕನ್ನಡ ನಾಡು ಕಂಡ ಪ್ರಖರ ವಿಚಾರವಾದಿ. ಅಧ್ಯಾಪಕರಾಗಿ, ಬರಹಗಾರರಾಗಿ ಪತ್ರಕರ್ತರಾಗಿ ಕೆಲಸ ಮಾಡಿದ ಬೀವಿಯವರು ನಾಡಿನ ವೈಚಾರಿಕ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ದೊಡ್ಡದು. ’ವೇದಾಂತ’ ರೆಜಿಮೆಂಟ್, ವೇದಗಳಲ್ಲಿ ಜನಸಾಮಾನ್ಯರು, ಭಗವದ್ಗೀತೆ: ಒಂದು ವೈಚಾರಿಕ ಒಳನೋಟ ಮುಂತಾದ ಅವರ ಕೃತಿಗಳು ನಾಡಿನ ವಿಚಾರ ಸಾಹಿತ್ಯದಲ್ಲಿ ಶಾಶ್ವತ ಸ್ಥಾನ ಪಡೆದಿರುವಂತವಹು. ಇದೀಗ ನಿವೃತ್ತ ಜೀವನ ಸಾಗಿಸುತ್ತಿರುವ ಬೀವಿಯವರು ಸಮಕಾಲೀನ ಸಂಗತಿಕಳ ಕುರಿತು ಮಾತನಾಡಿದ್ದಾರೆ. ನಾಡಿನಲ್ಲಿ ವೈಚಾರಿಕ ಸಾಹಿತ್ಯ ಪರಂಪರೆಗೆ ಬಹಳಷ್ಟು ಕೊಡುಗೆ ನೀಡಿರುವವರು ನೀವು. ವೈಚಾರಿಕ ಸಾಹಿತ್ಯ ರಚನೆಗೆ ನೀವು ತೊಡಗಿಕೊಂಡಿದ್ದಕ್ಕೆ ಕಾರಣಗಳೇನಿತ್ತು?  ನನಗೆ ನನ್ನ ಸುತ್ತಮುತ್ತಲಿನ ಸಮಾಜವು ಧರ್ಮನಿಷ್ಟತೆ, ಜಾತಿ ನಿಷ್ಠತೆಯ ಅಂಧಕಾರದಲ್ಲಿ ಬಳಲುತ್ತಿದೆ ಎನಿಸಿತ್ತು. ಕತೆ ಕವನಕಿಂತ ವೈಚಾರಿಕ ಸಾಹಿತ್ಯ ಜನರನ್ನು ಜಾಗೃತಗೊಳಿಸಬಲ್ಲದು ಎಂಬ ನಂಬಿಕೆ ನನ್ನದಾಗಿತ್ತು. ಹಾಗಾಗಿ ಜನರಿಗೆ ವಿಚಾರವನ್ನು ನೇರವಾಗಿ ತಲುಪಿಸಬೇಕೆಂಬ ಪ್ರೇರಣೆ ಉಂಟಾಯಿತು. ಜನರು ಯಾವುದನ್ನು ಅತ್ಯಂತ ಪವಿತ್ರ, ಪೂಜ್ಯ ಎಂದು ತಿಳಿದಿದ್ದರೋ ಅದರ ಮೂಲ ಪರಿಕಲ್ಪನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದಲೇ ಅನೇಕ ಲೇಖನಗಳನ್ನು ಬರೆಯುತ್ತಾ ಹೋದೆ. ನನ್ನಲ್ಲಿ ವೈಚಾರಿಕ ಪ್ರಜ್ಞೆ ಬೆಳೆಯಲು ಕಾರಣ ಜನಪದರು. ಅವರ ನುಡಿ, ಬದುಕಿನ ಪ್ರೀತಿ, ಸ್ಥಾವರ ನಿರಾಕರಣದ ಪ...