ಪೋಸ್ಟ್‌ಗಳು

ಜನವರಿ, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

"ಭ್ರಷ್ಟಾಚಾರಕ್ಕಿಂತಲೂ ದೊಡ್ಡ ವ್ಯಾಧಿ ಮತಾಂಧತೆ " -ಕೋ. ಚೆನ್ನಬಸಪ್ಪ

ಇಮೇಜ್
 ಕೋ.ಚೆ ಎಂದೇ ನಾಡಿನಲ್ಲಿ ಜನಜನಿತವಾಗಿರುವ ಕೋ. ಚೆನ್ನಬಸಪ್ಪ ಅವರು ವೃತ್ತಿಯಲ್ಲಿ ನ್ಯಾಯಾಧೀಶರಾಗಿ, ವಕೀಲರಾಗಿ ಕೆಲಸ ಮಾಡಿದ್ದರೂ ತಮ್ಮ ಲೇಖನಿಯ ಮೂಲಕ ನಿಜವಾದ ನ್ಯಾಯವಾದಿಗಳಾಗಿ ನಾಡಿನ ಸಾಕ್ಷಿಪ್ರಜ್ಞೆಯಾಗಿ ಬದುಕಿರುವಂತಹವರು. ಅವರು ಬರೆದ ಪ್ರತಿಯೊಂದು ಬರಹವೂ ಸಮಾಜದ ಒಳಿತಿನ ಆಶಯವನ್ನೇ ಹೊಂದಿರುವಂತಹುದು. ತಮ್ಮ ಬದುಕಿನ ೯೦ರ ಹರೆಯದಲ್ಲಿರುವ ಅವರನ್ನು ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು  ಸಹೃದಯರೆಲ್ಲರ ಪಾಲಿಗೆ ಸಂತಸದ ವಿಷಯ. ದ ಸಂಡೆ ಇಂಡಿಯನ್ ಗಾಗಿ ಹಲವಾರು ವಿದ್ಯಮಾನಗಳ ಕುರಿತು  ಕೋ.ಚೆ.ಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕುರಿತು ಏನನ್ನಿಸುತ್ತಿದೆ? ನನ್ನ ಆಯ್ಕೆಯ ಕುರಿತು ಹೇಳುವುದಾದರೆ ಬಹುಶಃ ನನ್ನನ್ನು ಹೊರತುಪಡಿಸಿದ ಪಟ್ಟಿಯಲ್ಲಿದ್ದ ಇತರರಿಗೂ ನನ್ನ ಆಯ್ಕೆಯ ವಿಷಯದಲ್ಲಿ ತಕರಾರಿಲಿಲ್ಲ ಎಂದೆನಿಸುತ್ತದೆ. ಇದರಿಂದಾಗಿ ಪರಿಷತ್ತಿನ ಅಧ್ಯಕ್ಷರಿಗೂ ಸುಲಭವಾಯಿತು ಎಂದುಕೊಳ್ಳುತ್ತೇನೆ. ನಿಜಹೇಳಬೇಕೆಂದರೆ ನಾನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎಂದು ಕನಸು ಮನಸಿನಲ್ಲಿಯೂ ಯೋಚಿಸಿರಲಿಲ್ಲ. ಈ ಸ್ಥಾನವನ್ನು ಪಡೆಯಬಹುದು ಎಂದು ನನಗೆ ಎಂದೂ ಅನಿಸಿರಲಿಲ್ಲ. ಅದಕ್ಕಾಗಿ ನಾನು ಬರೆದೂ ಇಲ್ಲ. ಮತ್ತೆ ಈ ಸ್ಥಾನ ಬಹುತೇಕ ಶಿಕ್ಷಕ ಕ್ಷೇತ್ರದಿಂದ ಬಂ...