ಆರೋಗ್ಯ ಕ್ಷೇತ್ರದ ಅನಾರೋಗ್ಯಕ್ಕೆ ಮದ್ದೇನು? : ಅಮೀರ್ ಖಾನ್ ಅಂಕಣ ಬರಹ
(ದ ಹಿಂದೂ ಪತ್ರಿಕೆಯಲ್ಲಿ ಈ ಬರಹ ಪ್ರಕಟವಾಗಿತ್ತು.) ನಾನೊಂಥರಾ ಕನಸುಗಾರ. ನಾವೆಲ್ಲರೂ ಸಹ ಬಡವರು, ಶ್ರೀಮಂತರೆಂಬ ಭೇಧವಿಲ್ಲದೆ ಎಲ್ಲರೂ ಒಂದೇ ಬಗೆಯ ಆರೋಗ್ಯ ಸೌಲಭ್ಯಗಳನ್ನು ಪಡೆಯುವಂತಹ ದಿನ ನಮ್ಮ ದೇಶದಲ್ಲಿ ಬರುತ್ತದೆ ಎನ್ನುವುದು ನನ್ನ ಕನಸು. ಅನೇಕರಿಗೆ ಇದೊಂದು ಬಗೆಯಲ್ಲಿ ಅವಾಸ್ತವವಾದ ಹಾಗೂ ಅಸಾಧ್ಯವಾದಂತಹ ಹುಚ್ಚುಕನಸು ಎನ್ನಿಸಬಹದು. ಆದರೆ ಇದು ಖಂಡಿತವಾಗಿಯೂ ಕಾಣಬೇಕಾದಂತಹ ಕನಸು ಹಾಗೂ ಇಂತಹ ಕನಸೊಂದು ನನಸಾಗಲೇಬೇಕೆನ್ನಲು ಕಾರಣಗಳಿವೆ ಎನ್ನುವುದು ನನ್ನ ನಂಬುಗೆ. ನೀವು ಬಡವರಿರಲಿ, ಶ್ರೀಮಂತರಿರಲಿ, ನಿಮ್ಮ ಪ್ರೀತಿಪಾತ್ರೊಬ್ಬರನ್ನು ಕಳೆದುಕೊಂಡಾಗ ಉಂಟಾಗುವ ದು:ಖ ದುಮ್ಮಾನಗಳಿಗೆ ಭಿನ್ನಭೇಧವಿರುವುದಿಲ್ಲ. ನನ್ನ ಮಗು ವಾಸಿಯಾಗದ ಖಾಯಿಲೆಗೆ ತುತ್ತಾಗಿ ನರಳಿ ನರಳಿ ತೀರಿಕೊಳ್ಳುವಾಗ, ಆಗ ನನಗೇನೂ ಮಾಡಲು ಸಾಧ್ಯವಾಗದಿರುವಾಗ ನಿಜಕ್ಕೂ ದು:ಖವಾಗುತ್ತದೆ. ಆದರೆ ಆ ಮಗುವಿನ ಖಾಯಿಲೆಯನ್ನು ಗುಣಪಡಿಸಬಹದಾದ ಔಷಧವೊಂದಿದೆ ಎಂದು ತಿಳಿದೂ ನನಗೆ ಆ ಔಷಧಿಯನ್ನು ಕೊಳ್ಳಲಾಗದಿರುವ ಕಾರಣಕ್ಕೆ ನನ್ನ ಮಗುವು ನರಳಿ ಸಾಯುತ್ತದೆ ಎಂದಾದಾಗ, ಅದನ್ನು ನಾನು ನೋಡಿ ಸುಮ್ಮನಿರಬೇಕಾಗಿ ಬಂದಾಗ - ಅಂತಹ ಒಂದು ಸ್ಥಿತಿ ನಿಜಕ್ಕೂ ದುರಂತಮಯ. ಒಂದು ಒಳ್ಳೆಯ ಆರೋಗ್ಯ ಆರೈಕೆ ವ್ಯವಸ್ಥೆಯೊಂದು ನಮ್ಮಲ್ಲಿಲ್ಲದಿರುವಂತೆ ಮಾಡಿರುವ ಕಾರಣವಾದರೂ ಏನು? ನಾವು ಅಸಂಖ್ಯ ಜನರು ತೆರಿಗೆ ಕಟ್ಟುತ್ತೇವೆ. ಕೆಲವರು ಕಟ್ಟುವುದಿಲ್ಲ. ಹಾಗೆಯೇ ಬಹುತೇಕ ಜನರಿಗೆ ಪ್ರ...