ಪೋಸ್ಟ್‌ಗಳು

ಮಾರ್ಚ್, 2014 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಾಲಿವುಡ್ ನಟಿಯ ಅಂತರಂಗದ ಮಾತುಗಳು

ಇಮೇಜ್
ಹಾಲಿವುಡ್ ನಟಿ ಲುಪಿತಾ ನ್ಯೋಂಗೊಗೆ ಮೊನ್ನೆ ಆಸ್ಕರ್ ಪ್ರಶಸ್ತಿ ಲಭಿಸಿದೆ. ಸ್ಟೀವ್ ಮಕೀನ್ ನಿರ್ದೇಶನದ  12 Years a Slave    ಚಿತ್ರದಲ್ಲಿ ಪಾಟ್ಸಿ ಪಾತ್ರದಲ್ಲಿ ಅತ್ಯದ್ಭುತವಾಗಿ ನಟಿಸಿದ ಈಕೆಗೆ ’ಅತ್ಯುತ್ತಮ ಪೋಷಕನಟಿ’ ಪ್ರಶಸ್ತಿ ಲಭಿಸಿದೆ. ಈ ಕೀನ್ಯಾ ಮೂಲತ ಪೋಷಕರನ್ನು ಹೊಂದಿರುವ ಮೆಕ್ಸಿಕನ್ ಕಪ್ಪು ವರ್ಣದ ತಾರೆಗೆ ಆಸ್ಕರ್ ಪ್ರಶಸ್ತಿ ಲಭಿಸುವ ಮುನ್ನ 'ಎಸೆನ್ಸ್ ಮ್ಯಾಗಜೀನ್’  ಎಂಬ ಪ್ರಸಿದ್ಧ ಸಿನಿಮಾ ಪತ್ರಿಕೆ ’ಬ್ಲಾಕ್ "ಮೆನ್ ಇನ್ ಹಾಲಿವುಡ್’ ಪ್ರಶಸ್ತಿಯನ್ನು ನೀಡಿ ಗೌರವಿಸಿತು. ಆ ಪ್ರಶಸ್ತಿ ಆಕೆ ಸ್ವೀಕರಿಸುವಾಗ ಮಾಡಿದ ಭಾಷಣದಲ್ಲಿ ತನ್ನ ಅಂತರಂಗದ ಸೌಂದರ್ಯವನ್ನು ಬಿಚ್ಚಿಟ್ಟಳು. ಅವಳಾಡಿದ ಮಾತುಗಳನ್ನು ಅನುವಾದಿಸಿ ಬರಹ ರೂಪದಲ್ಲಿರಿಸಿದ್ದೇನೆ.                                                        *****    " ಹುಡುಗಿಯೊಬ್ಬಳು ನನಗೆ ಬರೆದಿದ್ದ ಪತ್ರದ ಒಂದೆರಡು ಸಾಲುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇನೆ. ' ಪ್ರಿಯ ಲುಪೀಟಾ, ರಾತ್ರೋ ರಾತ್ತಿ ಹಾಲಿವುಡ್‌ನಲ್ಲಿ ಯಶಸ್ಸು ಕಂಡ ನೀನು ಇಷ್ಟು ಕಪ್ಪಗಿರಲಿಕ್ಕೆ ನಿಜಕ್ಕೂ ಅದೃಷ್ಟ ಮಾಡಿದ್ದೆ ಅನ್ನಿಸುತ್ತ್ತಿದೆ. ನಾನು ನನ್ನ ಚರ್ಮವನ...