ಪೋಸ್ಟ್‌ಗಳು

ಡಿಸೆಂಬರ್ 30, 2014 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

‘ರಾಂಗ್‌ನಂಬರ್’ಗಳ ಸಂತೆಯಲ್ಲಿ ನಿಂತು ರೈಟ್ ನಂಬರ್ ತೋರಿಸುವ ’pk’

ಇಮೇಜ್
“ ಹಮ್‌ಕಾ ಲಗಾತ್ ಹೈ ಬಗವಾನ್ ಸೆ ಬಾತ್ ಕರೇ ಕಾ ಕಮ್ಮುನಿಕೇಸನ್ ಸಿಸ್ಟಂ ಇಸ್ ಗೋಲಾ ಕಾ ಟೋಟಲ್ ಲುಲ್ ಹೋ ಚುಕಾ ಹೇ ” (ನಂಗನ್ಸೋ ಪ್ರಕಾರ ಈ ಬೂಮಿ ಮೇಲೆ ದೇವರ ಜೊತೆ ಮಾತಾಡೋ ಕಮ್ಯುನಿಕೇಶನ್ ಸಿಸ್ಟಂ ಪೂರಾ ಎಡವಟ್ಟಾಗಿದೆ) - pk ಸಿನಿಮಾದಲ್ಲಿ ಪಿಕೆ (ಅಮೀರ್ ಖಾನ್) ಹೇಳುವ ಮಾತು \ ಏಲಿಯನ್ ಅಂದರೆ ಅನ್ಯಗ್ರಹ ಜೀವಿಯೊಬ್ಬ ಒಂದು ಸಂಶೋಧನೆಗಾಗಿ ಭೂಮಿಯ ಬಂದು ಸೀದಾ ರಾಜಾಸ್ತಾನದ ಹಳ್ಳಿಯೊಂದರಲ್ಲಿ ಇಳಿದು ತಾನು ಬಂದ ಆಕಾಶಬಂಡಿಯ (ಸ್ಪೇಸ್‌ಕ್ರಾಪ್ಟ್) ರಿಮೋಟ್ ಕಂಟ್ರೋಲರ್ ಕಳೆದುಕೊಂಡುಬಿಡುತ್ತಾನೆ. ಅಲ್ಲಿಂದ ಶುರುವಾಗುತ್ತದೆ ಈ ಭಾರತ ಭೂಮಿಯ ಮಂದಿ-ಮಂದಿರಗಳ ನಡುವೆ ಅವನ ಪೀಕಲಾಟ. ಹೀಗೊಂದು ಕತೆಯನ್ನು ಹೆಣೆದು ಅದನ್ನೊಂದು ಅದ್ಭುತ ಸಿನಿಮಾ ಮಾಡಿ ಜನರ ಮುಂದಿಟ್ಟಿದೆ ರಾಜ್‌ಕುಮಾರ್ ಹಿರಾನಿ- ಅಭಿಜಿತ್ ಜೋಶಿ ಮತ್ತು ಬಾಲಿವುಡ್ ನಟ ಅಮೀರ್ ಖಾನ್ ಜೋಡಿ. ತ್ರೀ ಈಡಿಯಟ್ಸ್ ಸಿನಿಮಾದ ನಂತರ ಇದೀಗೆ ಅಂತಹದ್ದೇ ಒಂದು ಅದ್ಭುತ ಸಿನಿಮಾವನ್ನು ಹಿರಾನಿ-ಅಮೀರ್ ಜೋಡಿ ನೀಡಿದೆ. ಸಿನಿಮಾಗಳಿಂದ ಬರೀ ಮನರಂಜನೆಯಲ್ಲದೇ ಉತ್ತಮವಾದ ಸಂದೇಶಗಳನ್ನೂ ನಿರೀಕ್ಷಿಸುವವರು ಯಾವಕಾರಣಕ್ಕೂ ತಪ್ಪಿಸಿಕೊಳ್ಳಬಾರದ ಸಿನಿಮಾ pk . ಭೂಗೋಳದ ಮೇಲೆ ಬೆತ್ತಲೆಯಾಗಿ ಇಳಿದ ಸ್ವಲ್ಪ ಹೊತ್ತಿಗೇ ತನ್ನ ರಿಮೋಟ್ ಕಂಟ್ರೋಲರ್ ಕಳವಾಗಿ ಅದಕ್ಕಾಗಿ ಹುಡುಕುತೊಡಗುವ ಈ ಏಲಿಯೆನ್ ವರ್ತನೆಗಳನ್ನು ನೋಡಿ 'ತೂ ಪಿಕೆ ಹೈ ಕ್ಯಾ? ಎಂದು ಕೇಳುತ್ತಾರೆ. ಕೊನ...