ಪೋಸ್ಟ್‌ಗಳು
ಪ್ರಚಲಿತ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ
ISIS ಭಯೋತ್ಪಾದನೆ ಮತ್ತು ಮದ್ಯಪ್ರಾಚ್ಯದ ರಕ್ತಚರಿತ್ರೆ!
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
By ಹರ್ಷಕುಮಾರ್ ಕುಗ್ವೆ
Harshakumar Kugwe
ಕಳೆದೆರಡು ತಿಂಗಳ ಹಿಂದೆ ಇರಾಕಿನ ಪಟ್ಟಣಗಳಲ್ಲಿ ಧರ್ಮಾಂಧರು ನಡೆಸಿರುವ ಕ್ರೌರ್ಯವನ್ನು ನೋಡಿ ಜಗತ್ತು ಹೌಹಾರಿದೆ. ಒಂದೇ ಧರ್ಮದ ಆದರೆ ಬೇರೆಯ ಪಥದವರೆಂಬ ಕಾರಣಕ್ಕಾಗಿ ಜನರನ್ನು ಕೈಕಟ್ಟಿ ಸಾಲಾಗಿ ನಿಲ್ಲಿಸಿ ತಲೆಗೇ ಗುಂಡಿಟ್ಟು ಹೊಡೆದು ಕೊಲ್ಲುವ ದೃಶ್ಯಗಳನ್ನು ಜಗತ್ತಿನ ವೀಕ್ಷಣೆಗೆ ಬಿಡುಗಡೆಗೊಳಿಸಿದ ಆ ಕ್ರೂರಿ ಧರ್ಮಾಂಧ ಪಡೆಯ ಹೆಸರು ISIS (ಇಸ್ಲಾಮಿಕ್ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ). ಇರಾಕಿನಲ್ಲಿರುವ ಶಿಯಾ ಮುಸ್ಲಿಮರಿಗೆ ಸಂಬಂಧಿಸಿದ ಪುರಾತನ ಐತಿಹಾಸಿಕ ಸ್ಮಾರಕಗಳನ್ನೂ, ಕ್ರೈಸ್ತ ದೇಗುಲಗಳನ್ನೂ ಪುಡಿಗಟ್ಟುತ್ತಾ ಚರಿತ್ರೆಯ ನೆನಪನ್ನೇ ಧ್ವಂಸಗೊಳಿಸುತ್ತ ನಡೆದಿದೆ ಈ ವಿಧ್ವಂಸಕ ಜಿಹಾದಿ ಪಡೆ. ಇರಾಕ್‌ನ ಮುಖ್ಯ ನಗರವಾದ ಮೋಸುಲ್‌ನ್ನು ವಶಪಡಿಸಿಕೊಂಡು ಅಲ್ಲಿನ ಕೇಂದ್ರ ಬ್ಯಾಂಕ್‌ನಲ್ಲಿನ ಸು.500 ದಶಲಕ್ಷ ಡಾಲರ್ ಹಣ ಮತ್ತು ಬೃಹತ್ ಪ್ರಮಾಣದ ಬಂಗಾರವನ್ನು ವಶಪಡಿಸಿಕೊಂಡಿದೆ. ಈಗ ಅದು ಕಡಿಮೆಯೆಂದರೂ 1200 ಕೋಟಿರೂಗಳ ಆಸ್ತಿ ಹೊಂದಿದೆಯೆಂದು ಹೇಳಲಾಗುತ್ತಿದೆ. ಈ ಧರ್ಮಾಂಧ ಪಡೆಯ ನಾಯಕ ಅಬು ಬಕ್ರಲ್ ಬಾಗ್ದಾದಿ ಕ್ರೂರತೆ ಮತ್ತು ಸಂಘಟನೆಯಲ್ಲಿ ಒಸಾಮಾ ಬಿನ್ ಲಾಡೆನ್ನನನ್ನೂ ಮೀರಿಸುವವಂತಹ ಕಟುಕ. ಈ ಹಿಂದೆ ಆಲ್ ಖೈದಾದಲ್ಲೇ ಇದ್ದು ಅದರಿಂದ ಸಿಡಿದು ಬಂದವನು. ಇದೀಗ ಆಲ್‌ಖೈದಾವನ್ನೇ ಟೀಕಿಸುತ್ತ ಅದು ಹಾದಿ ತಪ್ಪಿದೆ ಎಂದೂ ತಾನೇ ನಿಜವಾದ ಜಿಹಾದ್ ನಡೆಸುತ್ತಿರುವೆನೆಂದೂ ತಿಳಿಸುತ್ತಾ ಬಂದಿರುವ ಈತ ಇರಾಕ್ ಮೇಲೆ ನಡೆಸಿದ ದಾ...
ಆರೋಗ್ಯ ಕ್ಷೇತ್ರದ ಅನಾರೋಗ್ಯಕ್ಕೆ ಮದ್ದೇನು? : ಅಮೀರ್ ಖಾನ್ ಅಂಕಣ ಬರಹ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
By ಹರ್ಷಕುಮಾರ್ ಕುಗ್ವೆ
Harshakumar Kugwe
(ದ ಹಿಂದೂ ಪತ್ರಿಕೆಯಲ್ಲಿ ಈ ಬರಹ ಪ್ರಕಟವಾಗಿತ್ತು.) ನಾನೊಂಥರಾ ಕನಸುಗಾರ. ನಾವೆಲ್ಲರೂ ಸಹ ಬಡವರು, ಶ್ರೀಮಂತರೆಂಬ ಭೇಧವಿಲ್ಲದೆ ಎಲ್ಲರೂ ಒಂದೇ ಬಗೆಯ ಆರೋಗ್ಯ ಸೌಲಭ್ಯಗಳನ್ನು ಪಡೆಯುವಂತಹ ದಿನ ನಮ್ಮ ದೇಶದಲ್ಲಿ ಬರುತ್ತದೆ ಎನ್ನುವುದು ನನ್ನ ಕನಸು. ಅನೇಕರಿಗೆ ಇದೊಂದು ಬಗೆಯಲ್ಲಿ ಅವಾಸ್ತವವಾದ ಹಾಗೂ ಅಸಾಧ್ಯವಾದಂತಹ ಹುಚ್ಚುಕನಸು ಎನ್ನಿಸಬಹದು. ಆದರೆ ಇದು ಖಂಡಿತವಾಗಿಯೂ ಕಾಣಬೇಕಾದಂತಹ ಕನಸು ಹಾಗೂ ಇಂತಹ ಕನಸೊಂದು ನನಸಾಗಲೇಬೇಕೆನ್ನಲು ಕಾರಣಗಳಿವೆ ಎನ್ನುವುದು ನನ್ನ ನಂಬುಗೆ. ನೀವು ಬಡವರಿರಲಿ, ಶ್ರೀಮಂತರಿರಲಿ, ನಿಮ್ಮ ಪ್ರೀತಿಪಾತ್ರೊಬ್ಬರನ್ನು ಕಳೆದುಕೊಂಡಾಗ ಉಂಟಾಗುವ ದು:ಖ ದುಮ್ಮಾನಗಳಿಗೆ ಭಿನ್ನಭೇಧವಿರುವುದಿಲ್ಲ. ನನ್ನ ಮಗು ವಾಸಿಯಾಗದ ಖಾಯಿಲೆಗೆ ತುತ್ತಾಗಿ ನರಳಿ ನರಳಿ ತೀರಿಕೊಳ್ಳುವಾಗ, ಆಗ ನನಗೇನೂ ಮಾಡಲು ಸಾಧ್ಯವಾಗದಿರುವಾಗ ನಿಜಕ್ಕೂ ದು:ಖವಾಗುತ್ತದೆ. ಆದರೆ ಆ ಮಗುವಿನ ಖಾಯಿಲೆಯನ್ನು ಗುಣಪಡಿಸಬಹದಾದ ಔಷಧವೊಂದಿದೆ ಎಂದು ತಿಳಿದೂ ನನಗೆ ಆ ಔಷಧಿಯನ್ನು ಕೊಳ್ಳಲಾಗದಿರುವ ಕಾರಣಕ್ಕೆ ನನ್ನ ಮಗುವು ನರಳಿ ಸಾಯುತ್ತದೆ ಎಂದಾದಾಗ, ಅದನ್ನು ನಾನು ನೋಡಿ ಸುಮ್ಮನಿರಬೇಕಾಗಿ ಬಂದಾಗ - ಅಂತಹ ಒಂದು ಸ್ಥಿತಿ ನಿಜಕ್ಕೂ ದುರಂತಮಯ. ಒಂದು ಒಳ್ಳೆಯ ಆರೋಗ್ಯ ಆರೈಕೆ ವ್ಯವಸ್ಥೆಯೊಂದು ನಮ್ಮಲ್ಲಿಲ್ಲದಿರುವಂತೆ ಮಾಡಿರುವ ಕಾರಣವಾದರೂ ಏನು? ನಾವು ಅಸಂಖ್ಯ ಜನರು ತೆರಿಗೆ ಕಟ್ಟುತ್ತೇವೆ. ಕೆಲವರು ಕಟ್ಟುವುದಿಲ್ಲ. ಹಾಗೆಯೇ ಬಹುತೇಕ ಜನರಿಗೆ ಪ್ರ...
ಡಿಸೆಂಬರ್ 21ನ್ನು ಕುರಿತ ಮಿಥ್‌ಗಳು
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
By ಹರ್ಷಕುಮಾರ್ ಕುಗ್ವೆ
Harshakumar Kugwe
(೨೦೧೨ರಲ್ಲಿ ಪ್ರಳಯವಾಗುತ್ತದೆ ಎಂಬ ಅಪಕಲ್ಪನೆ ಮತ್ತು ಅಪಪ್ರಚಾರಗಳು ೨೦೦೯ರಲ್ಲಿ ಆರಂಭವಾದ ಸಂದರ್ಭದಲ್ಲಿ ಈ ಲೇಖನವು 'ಗೈಡ್' ಮಾಸಪತ್ರಿಕೆಯಲ್ಲಿ ಪ್ರಕಟವಾಗಿತ್ತು) ೨೦೧೨ರ ಡಿಸೆಂಬರ್ ೨೧ ರಂದು ಜಗತ್ತಿನ ಅಂತ್ಯವಾಗಲಿದೆ. ಭೂಗ್ರಹವು ಯಾವುದೋ ಒಂದು ರೀತಿಯಲ್ಲಿ ಭಾರೀ ಮಾರ್ಪಾಡಿಗೆ ಒಳಗಾಗಲಿದೆ. ಭೂಮಿಯ ಮೇಲಿನ ಬಹುಪಾಲು ಮನುಷ್ಯರು ನಾಶವಾಗಲಿದ್ದಾರೆ. ಭೂಖಂಡಗಳು ಪ್ರತ್ಯೇಕಗೊಳ್ಳಲಿವೆ, ಇಡೀ ಜಗತ್ತೇ ಅಲ್ಲೋಲ ಕಲ್ಲೋಲವಾಗುತ್ತದೆ. ಆ ದಿನವೇ ಡೂಮ್ಸ್ ಡೇ ೨೦೧೨. ಅದು ಭೂಮಂಡಲದ ಅಂತ್ಯದ ದಿನ..... ಈ ಬಗೆಯ ಊಹಾಪೋಹಗಳು ಈಗಾಗಲೇ ನಮ್ಮ ಇಡೀ ಜಗತ್ತಿನಾದ್ಯಂತ ವ್ಯಾಪಕವಾದ ಪ್ರಚಾರವನ್ನು ಪಡೆದುಕೊಂಡು ಬಿಟ್ಟಿವೆ. ಅದರ ಈ ಕುರಿತ ಸಾವಿರಾರು ಸಂಖ್ಯೆಯ ಅಂತರ್ಜಾಲ ತಾಣಗಳಿಂದ, ಟೀವಿ ಚಾನಲ್‌ಗಳ ಕಾರ್ಯಕ್ರಮಗಳ ಟಿಆರ್‌ಪಿ ಕಾರ್ಯಕ್ರಮಗಳಿಂದ, ಕೆಲವು ಧಾರ್ಮಿಕ ವ್ಯಕ್ತಿಗಳು ಬರೆದಿರುವ ಪುಸ್ತಕಗಳಿಂದ, ಹೀಗೆ ನಾನಾ ಮೂಲಗಳಿಂದ ಈ ತಥಾಕಥಿತ ಪ್ರಳಯದ ಕುರಿತ ವಿಷಯಗಳನ್ನು ಓದಿ, ಕೇಳಿ ಜನರು ತೀವ್ರ ಆತಂಕ, ಕುತೂಹಲಗಳಿಗೊಳಗಾಗಿದ್ದಾರೆ. ಬೆಂಗಳೂರಿನ ಹತ್ತಿರ ಚಿಕ್ಕಗುಬ್ಬಿಯಲ್ಲಿರುವ ಮಾನಸ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾಗಿರುವ ಕೃಷ್ಣಾನಂದ ಎಂಬ ಸ್ವಾಮಿ ೨೦೧೨ ನೇ ಇಸವಿಯಲ್ಲಿ ನಡೆಯಬಹುದಾದ ಘಟನೆಗಳನ್ನು ತಮ್ಮ ದಿವ್ಯದರ್ಶನದ ಸಹಾಯದಿಂದ, ೨೦೧೨-ಎಂಡ್ ಆರ್ ಬಿಗಿನಿಂಗ್ ಎಂಬ ಕೃತಿಯನ್ನು ಬರೆದಿದ್ದರು. ಉತ್ತರ ಕನ್ನಡ ಜಿಲ್ಲೆಯ ಜೋಯಿಡ ತಾ...
ಕಸದ ವಿಷಚಕ್ರದೊಳಗೆ
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
By ಹರ್ಷಕುಮಾರ್ ಕುಗ್ವೆ
Harshakumar Kugwe
ಕೃಪೆ: ದ ಸಂಡೆ ಇಂಡಿಯನ್, ಕನ್ನಡ ಕಳೆದ ಆಗಸ್ಟ್ ೨೩ ರಂದು ಬೆಂಗಳೂರಿನ ಉತ್ತರ ಭಾಗದಲ್ಲಿರುವ ಹೆಸರಘಟ್ಟ ಹೋಬಳಿಯ ಮಾವಳ್ಳಿಪುರದಲ್ಲಿ ಏಕಾಏಕಿ ಸುಮಾರು ೬೦೦ ಪೊಲೀಸರು ಜಮಾಸಿದ್ದರು. ಯಾರೋ ಉಗ್ರಗಾ"ಗಳು ಆ ಹಳ್ಳಿಯಲ್ಲಿ ಅಡಗಿಕೊಂಡಿದ್ದರು ಎಂದಲ್ಲ. ಬದಲಾಗಿ ಹಾಗೆ ಜಮಾಸಿದ್ದ ಪೊಲೀಸರೇ ಎರಡು ದಿನಗಳ ಕಾಲ ಹಳ್ಳಿಯಲ್ಲಿ ಉಗ್ರ ವಾತಾವರಣ ಸೃಷ್ಟಿಸಿಬಿಟ್ಟಿದ್ದರು. ಅಂದು ಬೆಳಿಗ್ಗೆ ಊರಿನ ಮುಖಂಡರಿಗೆ ಕರೆಮಾಡಿದ ಡಿವೈಎಸ್‌ಪಿ ಶ್ರೀಧರ್ ಮಾವಳ್ಳಿಪುರ ಕಸದ ಗುಡ್ಡೆಯ ಬಳಿ ಬರಲು ತಿಳಿಸಿದ್ದರು. ಮಾವಳ್ಳಿಪುರದ ಮೂರು ನಾಲ್ಕು ಜನರು ಅಲ್ಲಿಗೆ ಹೋದೊಡನೆ ಆ ಪೊಲೀಸ್ ಅಧಿಕಾರಿ ಊರಿಗೆ ಬರುವ ಕಸದ ಲಾರಿಗಳನ್ನು ತಡೆಯುವುದೇಕೆ ಎಂದು ಧಮಕಿ ಹಾಕಿದರು. ಆಗ ಊರಿನವರು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಒಂದು ತಿಂಗಳ ಹಿಂದೆಯೇ ಅಲ್ಲಿ ಕಸವನ್ನು ಹಾಕುವುದನ್ನು ನಿಲ್ಲಿಸಲು ತಿಳಿಸಿದೆ ಎಂದು ಆದೇಶ ಪತ್ರ ತೋರಿಸಿದರು. ಆದರೆ ಅದಕ್ಕೆ ಗಮನ ನೀಡದ ಪೊಲೀಸರು ಬಲವಂತವಾಗಿ ಕಸ ತುಂಬಿದ ಲಾರಿಗಳಿಗೆ ಅವಕಾಶ ನೀಡಿದಾಗ ತಕ್ಷಣಕ್ಕೆ 25-30 ಜನರು ನೆರೆದು ಪೊಲೀಸರೊಂದಿಗೆ ಮಾತಿಗಿಳಿದರು. ಇಷ್ಟರಲ್ಲಿ ಏಕಾಏಕಿ ವಾಹನಗಳಲ್ಲಿ ಬಂದ ೬೦೦ ರಷ್ಟು ಪೊಲೀಸರು ಭಯಭೀತ ವಾತಾವರಣವನ್ನೇ ಹುಟ್ಟಿಸಿಬಿಟ್ಟರು. ಆದರೆ ಕಳೆದೊಂದು ದಶಕದಿಂದಲೂ ಬೆಂಗಳೂರು ಬಿಸಾಡಿ ಕಳಿಸಿದ ಕಸವನ್ನು ಸುರಿಸಿಕೊಂಡು ಇನ್ನಿಲ್ಲದ ತೊಂದರೆಗಳನ್ನನುಭವಿಸಿರುವ ಗ್ರಾಮಸ್ಥರು ಸೋಲೊಪ್ಪಲು ಸಿ...
ಹಳ್ಳಿ ಹೈದನ ತಲೆಕೆಡಿಸಿದವರಾರು?
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
By ಹರ್ಷಕುಮಾರ್ ಕುಗ್ವೆ
Harshakumar Kugwe
ಮೈಸೂರು- ಮಾನಂತವಾಡಿ ಮಾರ್ಗದಲ್ಲಿ ನಾಗರಹೊಳೆ ಅಭಯಾರಣ್ಯದ ಕಾಕನಕೋಟೆ ಕಾಡಿನ ನಡುವೆ ಇರುವ ಆ ಜೇನುಕುರುಬರ ಹಾಡಿಯ ಹೆಸರು ಬಳ್ಳೇ ಹಾಡಿ . ಈ ಹಾಡಿಯ ಕೃಷ್ಣಪ್ಪ ಮತ್ತು ಲಕ್ಷ್ಮಿ ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳು. ಒಬ್ಬ ಗಂಡುಮಗ. ಆತ ರಾಜೇಶ. ಇಂದು ಸುವರ್ಣ ವಾಹಿನಿಯ ಹಳ್ಳಿ ಹೈದ ಪ್ಯಾಟೆಗ್ ಬಂದ ರಿಯಾಲಿಟಿ ಶೋನಲ್ಲಿ ಗ್ರಾಂಡ್ ಫಿನಾಲೆವರೆಗೂ ಹೋಗಿ ವಿಜಯಿಯಾಗಿ ಬಂದು ನಂತರದಲ್ಲಿ ಇನ್ನೂ ಬಿಡುಗಡೆಯಾಗದ 'ಜಂಗಲ್ ಜಾಕಿ’ ಸಿನಿಮಾದಲ್ಲಿ ಐಶ್ವರ್ಯಳೊಂದಿಗೆ ನಟಿಸಿ, ಇದೀಗ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಮಾನಸಿಕ ಅನಾರೋಗ್ಯಕ್ಕೀಡಾಗಿ ಚಿಕಿತ್ಸೆ ಪಡೆಯುತ್ತಿರುವ ’ಹಳ್ಳಿ ಹೈದ’ನೇ ಈ ರಾಜೇಶ. ಕೆ.ಆರ್. ಆಸ್ಪತ್ರೆಯ ವೈದ್ಯರಾದ ಸುಧೀರ್ ಅವರು ಟಿಎಸ್‌ಐಗೆ ನೀಡಿದ ಮಾಹಿತಿಯ ಪ್ರಕಾರ ರಾಜೇಶ್‌ಗೆ ’ಅಕ್ಯೂಟ್ ಮೇನಿಯಾ’ ಅಟ್ಯಾಕ್ ಅಗಿದೆ. ಇದೊಂದು ರೋಗವೇನಲ್ಲ. ಆದರೆ ಮನಸ್ಸಿನಲ್ಲಿ ಉಂಟಾದ ತೀವ್ರ ಮಾನಸಿಕ ತಳಮಳ, ಹೊಯ್ದಾಟಗಳು ಒಬ್ಬ ವ್ಯಕ್ತಿಗೆ ಈ ಮಾನಸಿಕ ಅಸ್ವಸ್ಥತೆಯ್ನನು ಉಂಟು ಮಾಡುತ್ತದೆ ಎನ್ನುತ್ತಾರವರು. ಕಾಡಿನ ಹಾಡಿಯಲ್ಲಿ ತನ್ನ ಗೆಣೆಕಾರರೊಂದಿಗೆ ಸ್ವಚ್ಛಂದವಾಗಿ ಆಡಿಕೊಂಡಿದ್ದ ಜೇನುಕುರುಬರ ಹುಡುಗನೊಬ್ಬನಿಗೆ ಇಂತಹ ಪರಿಸ್ಥಿತಿ ಬರಲು ಕಾರಣಗಳೇನು? ಯಾರು ರಾಜೇಶನ ಇಂದಿನ ಈ ಸ್ಥಿತಿಗೆ ಕಾರಣರಾರು? ಅದು ೨೦೧೦ನೇ ಇಸವಿಯ ಮೇ ತಿಂಗಳಿನಲ್ಲಿ ಸುವರ್ಣ ವಾಹಿನಿಯು ’ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫು’ ಎಂಬ ರಿಯಾಲಿಟಿ ಶೋ ಸಾಕಷ್...