ಪೋಸ್ಟ್‌ಗಳು

ಸಂದರ್ಶನಗಳು (ಹಿರಿಯ ಚೇತನಗಳೊಂದಿಗೆ ಮಾತುಕತೆ) ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಲೇಖಕ ಯಾವತ್ತೂ ಸತ್ಯವನ್ನು ಹೇಳಬೇಕು: ನಾ. ಡಿಸೋಜಾ.

ಇಮೇಜ್
  ( ಹಿರಿಯ ಸಾಹಿತಿ ನಾ. ಡಿಸೋಜಾ ಅವರೊಂದಿಗೆ ನಡೆಸಿರುವ ಸಂದರ್ಶನದ ಆಯ್ದ ಭಾಗ) ನೀವು ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶಿಸಿದ ಹಿನ್ನೆಲೆಯೇನು? ಹೇಗೆ ಬರವಣಿಗೆಯ ಗೀಳು ಹತ್ತಿಸಿಕೊಂಡಿರಿ? ಮೂಲತಃ ಕೊಂಕಣಿ ಭಾಷಿಕನಾದ ನನಗೆ ಮನೆಯಲ್ಲಿ ಓದುವ ವಾತಾವರಣವಿತ್ತು. ನಮ್ಮ ತಂದೆ ಸ್ಕೂಲಿನ ಮಾಸ್ತರರಾಗಿದ್ದರು. ಅವರು ತಮ್ಮ ಪುಸ್ತಕಗಳಲ್ಲಿ ಮಕ್ಕಳಿಗಾಗಿ ಸಣ್ಣ ಸಣ್ಣ ಪದ್ಯಗಳನ್ನು ಬರೆದಿಟ್ಟುಕೊಳ್ಳುತ್ತಿದ್ದರು. ದೋಣಿ ಸಾಗಲಿ, ಮುಂದೆ ಹೋಗಲಿ, ನಾ ಕಸ್ತೂರಿ ನೀ ಹೊಯ್ಸಳ ಹೀಗೆ. ನಾನು 6ನೇ ವಯಸ್ಸಿನಲ್ಲಿ ಮೊದಲು ಓದಿದ ಪುಸತಕ ಅದೇ. ನನ್ನ ತಾಯಿ ನನಗೆ ಕೊಂಕಣಿ ಪದ್ಯಗಳನ್ನು ಹೇಳುತ್ತಿದ್ದರು. ತಂದೆ ಕಥೆಗಳನ್ನು ಹೇಳುತ್ತಿದ್ದರು. ನಾನು ಬೆಳೆಯುವ ಪೂರ್ವದಲ್ಲಿಯೇ ಅಕ್ಕ-ಅಣ್ಣಂದಿರ ಎಲ್ಲಾ ಪುಸ್ತಕಗಳನ್ನೂ ಓದಿ ಬಿಟ್ಟಿದ್ದೆ. ಸಂಧ್ಯಾರಾಗ, ಇಜ್ಜೋಡು, ಮರಳಿ ಮಣ್ಣಿಗೆ ಮುಂತಾದವನ್ನು ಪ್ರಾಥಮಿಕ ತರಗತಿಗಳಲ್ಲೇ ತಿರುವಿಹಾಕಿದ್ದೆ. ಓದುತ್ತಾ, ಓದುತ್ತಾ ಬರೆಯಬೇಕೆನ್ನಿಸಿತು. ಬರಹಗಾರನಾದೆ. ಅತ್ಯುತ್ತಮ ಶಿಕ್ಷಕರು ಸಿಕ್ಕಿದರು. ಗೊರೂರು ರಾಮಸ್ವಾಮಿ ಅಯ್ಯಂಗಾರರ ಅಣ್ಣ ಗೊರೂರು ನರಸಿಂಹಾಚಾರ್ ಎನ್ನುವವರು ಸಾಗರದ ಹೈಸ್ಕೂಲಿನಲ್ಲಿ ನನಗೆ ಶಿಕ್ಷಕರಾಗಿದ್ದರು.ಕಾಲೇಜಿನಲ್ಲಿ ಜಿ.ಎಸ್.ಶಿವರುದ್ರಪ್ಪ ನನಗೆ ಉಪನ್ಯಾಸಕರಾಗಿದ್ದರು. ಹಾಗೇ ಸಾಹಿತ್ಯದ ಬಗ್ಗೆ ಆಸಕ್ತಿ ಬೆಳೆಯಿತು. ಹೊಸ ತಲೆಮಾರಿನವರ ಸಾಹಿತ್ಯ ಸೃಷ್ಟಿಯನ್ನು ನೋಡಿದಾಗ ನಿಮಗೇನನ್ನಿಸು...

"ಭ್ರಷ್ಟಾಚಾರಕ್ಕಿಂತಲೂ ದೊಡ್ಡ ವ್ಯಾಧಿ ಮತಾಂಧತೆ " -ಕೋ. ಚೆನ್ನಬಸಪ್ಪ

ಇಮೇಜ್
 ಕೋ.ಚೆ ಎಂದೇ ನಾಡಿನಲ್ಲಿ ಜನಜನಿತವಾಗಿರುವ ಕೋ. ಚೆನ್ನಬಸಪ್ಪ ಅವರು ವೃತ್ತಿಯಲ್ಲಿ ನ್ಯಾಯಾಧೀಶರಾಗಿ, ವಕೀಲರಾಗಿ ಕೆಲಸ ಮಾಡಿದ್ದರೂ ತಮ್ಮ ಲೇಖನಿಯ ಮೂಲಕ ನಿಜವಾದ ನ್ಯಾಯವಾದಿಗಳಾಗಿ ನಾಡಿನ ಸಾಕ್ಷಿಪ್ರಜ್ಞೆಯಾಗಿ ಬದುಕಿರುವಂತಹವರು. ಅವರು ಬರೆದ ಪ್ರತಿಯೊಂದು ಬರಹವೂ ಸಮಾಜದ ಒಳಿತಿನ ಆಶಯವನ್ನೇ ಹೊಂದಿರುವಂತಹುದು. ತಮ್ಮ ಬದುಕಿನ ೯೦ರ ಹರೆಯದಲ್ಲಿರುವ ಅವರನ್ನು ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು  ಸಹೃದಯರೆಲ್ಲರ ಪಾಲಿಗೆ ಸಂತಸದ ವಿಷಯ. ದ ಸಂಡೆ ಇಂಡಿಯನ್ ಗಾಗಿ ಹಲವಾರು ವಿದ್ಯಮಾನಗಳ ಕುರಿತು  ಕೋ.ಚೆ.ಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕುರಿತು ಏನನ್ನಿಸುತ್ತಿದೆ? ನನ್ನ ಆಯ್ಕೆಯ ಕುರಿತು ಹೇಳುವುದಾದರೆ ಬಹುಶಃ ನನ್ನನ್ನು ಹೊರತುಪಡಿಸಿದ ಪಟ್ಟಿಯಲ್ಲಿದ್ದ ಇತರರಿಗೂ ನನ್ನ ಆಯ್ಕೆಯ ವಿಷಯದಲ್ಲಿ ತಕರಾರಿಲಿಲ್ಲ ಎಂದೆನಿಸುತ್ತದೆ. ಇದರಿಂದಾಗಿ ಪರಿಷತ್ತಿನ ಅಧ್ಯಕ್ಷರಿಗೂ ಸುಲಭವಾಯಿತು ಎಂದುಕೊಳ್ಳುತ್ತೇನೆ. ನಿಜಹೇಳಬೇಕೆಂದರೆ ನಾನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎಂದು ಕನಸು ಮನಸಿನಲ್ಲಿಯೂ ಯೋಚಿಸಿರಲಿಲ್ಲ. ಈ ಸ್ಥಾನವನ್ನು ಪಡೆಯಬಹುದು ಎಂದು ನನಗೆ ಎಂದೂ ಅನಿಸಿರಲಿಲ್ಲ. ಅದಕ್ಕಾಗಿ ನಾನು ಬರೆದೂ ಇಲ್ಲ. ಮತ್ತೆ ಈ ಸ್ಥಾನ ಬಹುತೇಕ ಶಿಕ್ಷಕ ಕ್ಷೇತ್ರದಿಂದ ಬಂ...

"ಭೂಮಿ ಮತ್ತು ರಂಗಭೂಮಿ ಎರಡೂ ಅತಂಕದಲ್ಲಿವೆ"- ಚಿದಂಬರರಾವ್ ಜಂಬೆ

ಇಮೇಜ್
ನಾಡಿನ ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆಯವರ ಕೊಡುಗೆ ಅಪಾರವಾದದ್ದು. ಹೆಗ್ಗೋಡಿನ ನೀನಾಸಂ, ಮೈಸೂರಿನ ರಂಗಾಯಣ ಮತ್ತು ಸಾಣೆಹಳ್ಳಿಯ ಶಿವಸಂಚಾರ ಈ ಮೂರೂ ಪ್ರಮುಖ ರಂಗಶಾಲೆಗಳಲ್ಲಿ ಅತ್ಯಮೂಲ್ಯ ಕೊಡುಗೆ ನೀಡಿರುವ ರಂಗನಿರ್ದೇಶಕ ಮತ್ತು ಚಿಂತಕ ಚಿದಂಬರರಾವ್ ಜಂಬೆಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  (ಚಿತ್ರಗಳು-ಹರ್ಷಕುಮಾರ್ ಕುಗ್ವೆ) ಆಧುನಿಕ ರಂಗಭೂಮಿಯ ಇಂದಿನ ಟ್ರೆಂಡ್ ಏನಾಗಿದೆ? ಈ ’ಆಧುನಿಕತೆ’ ಎನ್ನುವುದನ್ನೇ ಆಲೋಚನೆ ಮಾಡಬೇಕಾಗಿದೆ. ಏಕೆಂದರೆ ಇಂದು ಆಧುನಿಕತೆ ಎಂದು ಕರೆಯುವುದು ಕೇವಲ ತಾಂತ್ರಿಕವಾಗಿಯೇ ವಿನಃ ವಸ್ತುಸಂವಿಧಾನದಲ್ಲಿ ಆದಂತಹ ಬದಲಾವಣೆಗಳನ್ನು ಇಟ್ಟುಕೊಂಡು ನಾವು ಆಧುನಿಕತೆಯನ್ನು ನೋಡುತ್ತಿಲ್ಲ. ಈಗ ತಾಂತ್ರಿಕವಾಗಿ ಅಷ್ಟೇನು ಬದಲಾವಣೆಗಳು ಆಗಿಲ್ಲ ಎಂಬುದು ನನ್ನ ಅಭಿಪ್ರಾಯ. ವಸ್ತು ಸಂವಿಧಾನದಲ್ಲಿ ಕೂಡ ಹೇಳಿಕೊಳ್ಳುವಂತಹಾ ಬಹಳಷ್ಟು ಏನೂ ಬಂದಿಲ್ಲ. ಇಂದು ಆಧುನಿಕ ಅಂದರೆ ಜಾಗತಿಕರಣದ ವೇಗದಲ್ಲಿ ಹೋಗುತ್ತಿರುವುದರಿಂದ ಅದನ್ನೇ ಆಧುನಿಕತೆ ಎನ್ನುವ  ಸ್ಥಿತಿಗೆ ನಾವು ಬಂದು ಬಿಟ್ಟಿದ್ದೇವೆ. ವಾಸ್ತವದಲ್ಲಿ ಅದು ಆಧುನಿಕತೆಯಲ್ಲ. ಅದರ ಹೊರತಾಗಿ ಜಾಗತಿಕರಣವನ್ನು ನಿರಾಕರಣೆ ಮಾಡುವಂತಾದ್ದು ಅಥವಾ ಆ ವೇಗಕ್ಕೆ ಸಿಲುಕಿಕೊಳ್ಳದೇ ಇರುವ ಯಾವುದಾದರೂ ಒಂದು ಮಾರ್ಗವಿದ್ದರೆ  ಅದನ್ನ ನಾವು ಆಧುನಿಕತೆ ಎಂದು ಕರೆಯಬಹುದು. ನಮ್ಮ ಪಾರಂಪರಿಕವಾದ ರಂಗಭೂಮಿಗೂ ಇಂದಿನ ರಂಗಭೂಮಿಗೂ ಭಿನ್ನತೆಗ...

ವಿಶ್ವದ ಸಕಲ ಸಮಸ್ಯೆಗಳಿಗೂ ಉತ್ತರ ಬುದ್ಧನ ಚಿಂತನೆಯಲ್ಲಿದೆ- ಪ್ರೊ. ಕಾಳೇಗೌಡ ನಾಗವಾರ

ಇಮೇಜ್
ಬಂಡಾಯ ಸಾಹಿತ್ಯದಲ್ಲಿ ಗುರುತಿಸಿಕೊಂಡು ಅತ್ಯಂತ ಮೌಲ್ಯಯುತವಾದ ಸಾಹಿತ್ಯವನ್ನು ರಚಿಸಿರುವ ಪ್ರೊ. ಕಾಳೇಔಡ ನಾಡಿನ ಪ್ರಮುಖ ಸಾಹಿತಿ, ವಿಚಾರವಾದಿ ಮತ್ತು ಹೋರಾಟಗಾರರು. ಟಿಎಸ್‌ಐಗಾಗಿ ಹರ್ಷಕುಮಾರ್ ಕುಗ್ವೆ ಅವರೊಂದಿಗೆ ನಡೆಸಿದ ಸಂದರ್ಶನ ಇಲ್ಲಿದೆ.  ಜಗತ್ತಿನ ಮೊದಲ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿಕೊಂಡಿರುವ ನಾವು ಜಾನಪದ ಅಧ್ಯಯನದ ವಿಷಯದಲ್ಲಿ ಏನನ್ನು ನಿರೀಕ್ಷಿಸಬಹುದು? ಜಾನಪದ ಅಧ್ಯಯನ ಅನ್ನುವುದು ವಾಸ್ತವವಾಗಿ ಇಡೀ ಜನಸಮುದಾಯದ ಅನುಭವದ ಇತಿಹಾಸವನ್ನೇ ಹೇಳುತ್ತದೆ. ಅಲ್ಲಿ ಅಪರೂಪದ ಪ್ರಯೋಗಗಳಿವೆ; ಅಲ್ಲಿ ವ್ಯಕ್ತಿಗಿಂತ ಹೆಚ್ಚಾಗಿ ಸಮುದಾಯದ ಅನುಭವಗಳಿರುತ್ತವೆ. ನಮ್ಮ ಸಾಂಸ್ಕೃತಿಕ ಇತಿಹಾಸ, ಆಚರಣೆ, ಸಂಗೀತ ಇತ್ಯಾದಿ ಸಕಲ ವೈವಿಧ್ಯಗಳ ಆಗರವೇ ಜಾನಪದ. ಹೀಗಾಗಿಯೇ ಆಯಾಯಾ ದೇಶಗಳಲ್ಲಿ ವಿವಿಧ ಕಾಲಮಾನ, ಹವಾಗುಣಕ್ಕನುಗುಣವಾಗಿ, ಆಹಾರ ಪದ್ಧತಿ, ನಡೆನುಡಿ ವಿಚಾರಗಳಲ್ಲಿ ಪ್ರಯೋಗಶೀಲವಾಗಿ ಯಾವುದು ಹೆಚ್ಚು ಅರ್ಥಪೂರ್ಣ ಎಂದು ಮನುಷ್ಯ ಸದಾ ಹುಡುಕುತ್ತಿರುತ್ತಾನೆ. ಅದು ಅಕ್ಷರಸ್ತರ ಲೋಕಕ್ಕಿಂತ ಭಿನ್ನವಾದ ಪ್ರಾಮಾಣಿಕವಾದ ಅನುಭವ ಲೋಕ. ಆ ದೃಷ್ಟಿಯಿಂದ ಆಯಾ ದೇಶಗಳಲ್ಲಿ ತಜ್ಞರಾದವರು ಆ ಸಮಾಜವನ್ನು ಅರ್ಥಮಾಡಿಕೊಳ್ಳಲಿಕ್ಕಾಗಿ, ಜಾನಪದವನ್ನು ಜ್ಞಾನದ ಕಾರಣಕ್ಕಾಗಿ ಅಧ್ಯಯನಮಾಡುತ್ತಾರೆ. ಹಾಗೆಯೇ ನಮ್ಮ ಭಾರತದ ಸಂದರ್ಭದಲ್ಲಿ ಅಕ್ಷರಜ್ಞಾನ ಇರದಿದ್ದಾಗಲೂ ಸಮಾಜದ ಏಳಿಗೆಯನ್ನು ನಿರಂತರವಾಗಿ ಬಯಸುತ್ತಿದ್ದ ದೊಡ್ಡ...

ಸಾಮಾಜಿಕ ನ್ಯಾಯವನ್ನು ಬಲಿಪಶು ಮಾಡುವುದು ಸಲ್ಲದು- ಡಾ. ಎಚ್. ಎಸ್. ರಾಘವೇಂದ್ರ ರಾವ್

ಇಮೇಜ್
  ನಮ್ಮಲ್ಲಿ ಹಿಂದೆಂದಿಗಿಂತ ಅಪಾರ ಪ್ರಮಾಣದ ಸಾಹಿತ್ಯ ಸೃಷ್ಟಿಯಾಗುತ್ತಿದೆ. ಇದರಲ್ಲಿ ಮೌಲ್ಯಯುತ ಸಾಹಿತ್ಯ ಎಷ್ಟರ ಮಟ್ಟಿಗೆ ಬರುತ್ತಿದೆ?  ಇದಕ್ಕೆ ನಾಲ್ಕೇ ಪುಸ್ತಕಗಳು ಪ್ರಕಟವಾಗುತ್ತಿದ್ದಾಗ ಸುಲಭವಾಗಿ ಹೇಳಬಹುದಿತ್ತು. ಆದರೆ ನಾನ್ನೂರು ಪುಸ್ತಕಗಳು ಬರುತ್ತಿರುವಾಗ ಕಷ್ಟ. ಅನೇಕ ಸಲ ಓದದೆಯೇ ತೀರ್ಮಾನ ಕೊಡುತ್ತೇವೆ. ವಯಸ್ಸಾಗುತ್ತಾ ಹೋದ ಹಾಗೆ ಇತ್ತೀಚಿನ ಬರೆಹಗಳ ಬಗ್ಗೆ ಒಂದು ಬಗೆಯ ಅಸಹನೆಯನ್ನು ಕೆಲವರು ವ್ಯಕ್ತಪಡಿಸುತ್ತಾರೆ. 70ರ ದಶಕದಲ್ಲಿ ವಿಮರ್ಶೆ ಬರೆಯಲು ಆರಂಭಿಸಿದ್ದವರಿಗೆ ೨೦೧೦ರಲ್ಲಿ ಬಂದ ಸಾಹಿತ್ಯವೂ ಅಷ್ಟೇ ಮುಖ್ಯ ಎಂಬ ಮುಕ್ತ ಮನಸ್ಸು ಇರದಿದ್ದರೆ ಈಗಿನದೇನನ್ನೂ ಓದದೇ ಆದೇ ಕುವೆಂಪು ಅದೇ ಬೆಂದ್ರೆ ಎಂದುಕೊಂಡು ಕೂತಿರಬೇಕಾಗುತ್ತದೆ.  ಬದಲಿಗೆ ನಮ್ಮ ಕಾಲದಲ್ಲಿ ಬರುತ್ತಿರುವುದರಲ್ಲಿಯೂ ಒಳ್ಳೆಯದಿರುತ್ತದೆ ಎಂಬ ತಿಳುವಳಿಕೆ ಬೇಕು. ಕಸಕಡ್ಡಿ ಎನ್ನುವುದು ಎಲ್ಲಾ ಕಾಲದಲ್ಲಿಯೂ ಇದ್ದೇ ಇರುತ್ತದೆ. ಹಿಂದೆಯೂ ಇತ್ತು. ನಾಗವೇಣಿಯವರ ’ಗಾಂಧಿ ಬಂದ’, ಮೊಗಳ್ಳಿಯವರ ಬುಗುರಿ ಇಂತವೆಲ್ಲ ಎಷ್ಟೊಂದು ಶ್ರೇಷ್ಟವಾದವುಗಳಿವೆಯಲ್ಲ. ಅಮರೇಶ ನುಗಡೋಣಿ, ಎಚ್.ಎಸ್.ಶಿವಪ್ರಕಾಶ್, ನಾರಾಯಣಸ್ವಾಮಿ ಮುಂತಾದವರು ಅದ್ಭುತವಾಗಿ ಬರೆಯುತ್ತಿದ್ದಾರೆ. ಇದೇ ಹೊತ್ತಿಗೆ ಬರೆದಿದ್ದೆಲ್ಲವೂ ಸಾಹಿತ್ಯ ಎಂದು ಹೇಳಲೂ ಬರುವುದಿಲ್ಲ. ಇಂದು ಇರುವ ಒಂದು ದೊಡ್ಡ ಅಪಾಯ ಎಂದರೆ ಕೀರ್ತಿ ಅಥವಾ ಗುರುತಿಸುವಿಕೆ ಬಹಳ ಬೇಗ ಸಿಗುತ್ತಿರುವುದ...

"ನಮ್ಮ ಸಾಹಿತ್ಯ ವಿಮರ್ಶೆಯ ಮಾನದಂಡಗಳೇ ಪ್ರಶ್ನಾರ್ಹವಾಗಿವೆ": ಲಕ್ಷ್ಮಣ ಕೊಡಸೆ

ಇಮೇಜ್
ಪ್ರಜಾವಾಣಿಯಂತಹ ಪತ್ರಿಕೆಯಲ್ಲಿ ವರದಿಗಾರನ ಹುದ್ದೆಯಿಂದ ಮೊದಲುಗೊಂಡು ಸಹ ಸಂಪಾದಕ ಹುದ್ದೆಯವರಗೆ ಹಲವಾರು ಜವಾಬ್ದಾರಿಗಳನ್ನು ನಿರ್ವಹಿಸಿ ಅಪಾರ ಅನುಭವ ಪಡೆದವರು ಲಕ್ಷ್ಮಣ ಕೊಡಸೆಯವರು. ಮೂರು ದಶಕಗಳಿಗೂ ಹೆಚ್ಚು ಕಾಲ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಕತೆ, ಕಾದಂಬರಿ ಮುಂತಾದ ಪ್ರಕಾರಗಳಲ್ಲಿಯೂ ನಿರಂತರವಾಗಿ ತೊಡಗಿಸಿಕೊಂಡಿರುವ ಅವರು ಇದೀಗ ನಿವೃತ್ತ ಜೀವನ ನಡೆಸುತ್ತಿದ್ದಾರೆ. ಇಂದಿನ ಪತ್ರಿಕೋದ್ಯಮ, ಸಮಾಜ, ಸಾಹಿತ್ಯ, ರಾಜಕೀಯ ಇತ್ಯಾದಿಗಳ ಕುರಿತು ಹರ್ಷಕುಮಾರ್ ಕುಗ್ವೆ  ದ ಸಂಡೆ ಇಂಡಿಯನ್ ಗಾಗಿ ನಡೆಸಿದ ಸಂದರ್ಶನ  ಇಲ್ಲಿದೆ. ಸುದೀರ್ಘ ಅವಧಿಯ ಪತ್ರಕರ್ತ ವೃತ್ತಿಯ ನಂತರದಲ್ಲಿ ನಿವೃತ್ತಿ ಹೊಂದಿರುವುದು ಏನನ್ನಿಸುತ್ತಿದೆ?  ಆರ್ಥಿಕ ದೃಷ್ಟಿಯಿಂದ ಕೆಲಸ ಮುಂದುವರೆಸಲೇ ಬೇಕಾದ ಅಗತ್ಯ ನನಗೆ ಇನ್ನು ಇರಲಿಲ್ಲ. ಪತ್ರಿಕೋದ್ಯಮವೂ ಇತರ ವೃತ್ತಿಗಳಂತೆ ಒಂದು ವೃತ್ತಿಯಾದ್ದರಿಂದ ಅದನ್ನು ಮುಗಿಸಿ ಬೇರೆ ಜೀವನವನ್ನು ನಾವು ರೂಪಿಸಿಕೊಳ್ಳಬೇಕಾಗುತ್ತದೆ. ಪತ್ರ್ರಕರ್ತನಾದವನು  ಸಾಯುವವರೆಗೂ ಪತ್ರಕರ್ತನೇ ಎಂಬ ಭಾವನೆ ಜನರಲ್ಲಿಯೂ, ಕೆಲ ಪತ್ರಕರ್ತರಲ್ಲಿಯೂ ಇದೆ. ಹಾಗಿರಬೇಕಾಗಿಲ್ಲ. ಕಳೆದ 30-35 ವರ್ಷ ಪೂರ್ತಿ ಪತ್ರಿಕೋದ್ಯಮದಲ್ಲೇ ಮುಳುಗಿ ಹೋಗಿರುವುದರಿಂದ ಓದುವುದು ಸಾಕಷ್ಟು ಉಳಿದುಕೊಂದಿದೆ. ಸಾಕಷ್ಟು ಓದಲಿಕ್ಕಾಗದೇ ಅಪ್‌ಡೇಟ್ ಆಗಲಿಕ್ಕಾಗಲಿಲ್ಲ ಎಂಬ ಭಾವನೆ ನನಗಿದೆ. ಇಷ್ಟು ವರ್ಷಗಳ ಅನುಭವಗಳನ್ನು ಒ...