ಪೋಸ್ಟ್‌ಗಳು

ಆರೋಗ್ಯ ಕ್ಷೇತ್ರದ ಅನಾರೋಗ್ಯಕ್ಕೆ ಮದ್ದೇನು? : ಅಮೀರ್ ಖಾನ್ ಅಂಕಣ ಬರಹ

ಇಮೇಜ್
(ದ ಹಿಂದೂ ಪತ್ರಿಕೆಯಲ್ಲಿ ಈ ಬರಹ ಪ್ರಕಟವಾಗಿತ್ತು.) ನಾನೊಂಥರಾ ಕನಸುಗಾರ. ನಾವೆಲ್ಲರೂ ಸಹ ಬಡವರು, ಶ್ರೀಮಂತರೆಂಬ ಭೇಧವಿಲ್ಲದೆ ಎಲ್ಲರೂ ಒಂದೇ ಬಗೆಯ ಆರೋಗ್ಯ ಸೌಲಭ್ಯಗಳನ್ನು ಪಡೆಯುವಂತಹ ದಿನ ನಮ್ಮ ದೇಶದಲ್ಲಿ ಬರುತ್ತದೆ ಎನ್ನುವುದು ನನ್ನ ಕನಸು. ಅನೇಕರಿಗೆ ಇದೊಂದು ಬಗೆಯಲ್ಲಿ ಅವಾಸ್ತವವಾದ ಹಾಗೂ ಅಸಾಧ್ಯವಾದಂತಹ ಹುಚ್ಚುಕನಸು ಎನ್ನಿಸಬಹದು. ಆದರೆ ಇದು ಖಂಡಿತವಾಗಿಯೂ ಕಾಣಬೇಕಾದಂತಹ ಕನಸು ಹಾಗೂ ಇಂತಹ ಕನಸೊಂದು ನನಸಾಗಲೇಬೇಕೆನ್ನಲು ಕಾರಣಗಳಿವೆ ಎನ್ನುವುದು ನನ್ನ ನಂಬುಗೆ. ನೀವು ಬಡವರಿರಲಿ, ಶ್ರೀಮಂತರಿರಲಿ, ನಿಮ್ಮ ಪ್ರೀತಿಪಾತ್ರೊಬ್ಬರನ್ನು ಕಳೆದುಕೊಂಡಾಗ ಉಂಟಾಗುವ ದು:ಖ ದುಮ್ಮಾನಗಳಿಗೆ ಭಿನ್ನಭೇಧವಿರುವುದಿಲ್ಲ. ನನ್ನ ಮಗು ವಾಸಿಯಾಗದ ಖಾಯಿಲೆಗೆ  ತುತ್ತಾಗಿ ನರಳಿ ನರಳಿ ತೀರಿಕೊಳ್ಳುವಾಗ, ಆಗ ನನಗೇನೂ ಮಾಡಲು ಸಾಧ್ಯವಾಗದಿರುವಾಗ ನಿಜಕ್ಕೂ ದು:ಖವಾಗುತ್ತದೆ. ಆದರೆ ಆ ಮಗುವಿನ ಖಾಯಿಲೆಯನ್ನು ಗುಣಪಡಿಸಬಹದಾದ ಔಷಧವೊಂದಿದೆ ಎಂದು ತಿಳಿದೂ ನನಗೆ ಆ ಔಷಧಿಯನ್ನು ಕೊಳ್ಳಲಾಗದಿರುವ ಕಾರಣಕ್ಕೆ ನನ್ನ ಮಗುವು ನರಳಿ ಸಾಯುತ್ತದೆ ಎಂದಾದಾಗ, ಅದನ್ನು ನಾನು ನೋಡಿ ಸುಮ್ಮನಿರಬೇಕಾಗಿ ಬಂದಾಗ - ಅಂತಹ ಒಂದು ಸ್ಥಿತಿ ನಿಜಕ್ಕೂ ದುರಂತಮಯ. ಒಂದು ಒಳ್ಳೆಯ ಆರೋಗ್ಯ ಆರೈಕೆ ವ್ಯವಸ್ಥೆಯೊಂದು ನಮ್ಮಲ್ಲಿಲ್ಲದಿರುವಂತೆ ಮಾಡಿರುವ ಕಾರಣವಾದರೂ ಏನು? ನಾವು ಅಸಂಖ್ಯ ಜನರು ತೆರಿಗೆ ಕಟ್ಟುತ್ತೇವೆ. ಕೆಲವರು ಕಟ್ಟುವುದಿಲ್ಲ. ಹಾಗೆಯೇ ಬಹುತೇಕ ಜನರಿಗೆ ಪ್ರ...

"ಭ್ರಷ್ಟಾಚಾರಕ್ಕಿಂತಲೂ ದೊಡ್ಡ ವ್ಯಾಧಿ ಮತಾಂಧತೆ " -ಕೋ. ಚೆನ್ನಬಸಪ್ಪ

ಇಮೇಜ್
 ಕೋ.ಚೆ ಎಂದೇ ನಾಡಿನಲ್ಲಿ ಜನಜನಿತವಾಗಿರುವ ಕೋ. ಚೆನ್ನಬಸಪ್ಪ ಅವರು ವೃತ್ತಿಯಲ್ಲಿ ನ್ಯಾಯಾಧೀಶರಾಗಿ, ವಕೀಲರಾಗಿ ಕೆಲಸ ಮಾಡಿದ್ದರೂ ತಮ್ಮ ಲೇಖನಿಯ ಮೂಲಕ ನಿಜವಾದ ನ್ಯಾಯವಾದಿಗಳಾಗಿ ನಾಡಿನ ಸಾಕ್ಷಿಪ್ರಜ್ಞೆಯಾಗಿ ಬದುಕಿರುವಂತಹವರು. ಅವರು ಬರೆದ ಪ್ರತಿಯೊಂದು ಬರಹವೂ ಸಮಾಜದ ಒಳಿತಿನ ಆಶಯವನ್ನೇ ಹೊಂದಿರುವಂತಹುದು. ತಮ್ಮ ಬದುಕಿನ ೯೦ರ ಹರೆಯದಲ್ಲಿರುವ ಅವರನ್ನು ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆ ಮಾಡಿರುವುದು  ಸಹೃದಯರೆಲ್ಲರ ಪಾಲಿಗೆ ಸಂತಸದ ವಿಷಯ. ದ ಸಂಡೆ ಇಂಡಿಯನ್ ಗಾಗಿ ಹಲವಾರು ವಿದ್ಯಮಾನಗಳ ಕುರಿತು  ಕೋ.ಚೆ.ಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  ೭೯ನೆಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಕುರಿತು ಏನನ್ನಿಸುತ್ತಿದೆ? ನನ್ನ ಆಯ್ಕೆಯ ಕುರಿತು ಹೇಳುವುದಾದರೆ ಬಹುಶಃ ನನ್ನನ್ನು ಹೊರತುಪಡಿಸಿದ ಪಟ್ಟಿಯಲ್ಲಿದ್ದ ಇತರರಿಗೂ ನನ್ನ ಆಯ್ಕೆಯ ವಿಷಯದಲ್ಲಿ ತಕರಾರಿಲಿಲ್ಲ ಎಂದೆನಿಸುತ್ತದೆ. ಇದರಿಂದಾಗಿ ಪರಿಷತ್ತಿನ ಅಧ್ಯಕ್ಷರಿಗೂ ಸುಲಭವಾಯಿತು ಎಂದುಕೊಳ್ಳುತ್ತೇನೆ. ನಿಜಹೇಳಬೇಕೆಂದರೆ ನಾನು ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಆಯ್ಕೆಯಾಗುತ್ತೇನೆ ಎಂದು ಕನಸು ಮನಸಿನಲ್ಲಿಯೂ ಯೋಚಿಸಿರಲಿಲ್ಲ. ಈ ಸ್ಥಾನವನ್ನು ಪಡೆಯಬಹುದು ಎಂದು ನನಗೆ ಎಂದೂ ಅನಿಸಿರಲಿಲ್ಲ. ಅದಕ್ಕಾಗಿ ನಾನು ಬರೆದೂ ಇಲ್ಲ. ಮತ್ತೆ ಈ ಸ್ಥಾನ ಬಹುತೇಕ ಶಿಕ್ಷಕ ಕ್ಷೇತ್ರದಿಂದ ಬಂ...

ಡಿಸೆಂಬರ್ 21ನ್ನು ಕುರಿತ ಮಿಥ್‌ಗಳು

ಇಮೇಜ್
(೨೦೧೨ರಲ್ಲಿ ಪ್ರಳಯವಾಗುತ್ತದೆ ಎಂಬ ಅಪಕಲ್ಪನೆ ಮತ್ತು ಅಪಪ್ರಚಾರಗಳು ೨೦೦೯ರಲ್ಲಿ ಆರಂಭವಾದ ಸಂದರ್ಭದಲ್ಲಿ ಈ ಲೇಖನವು 'ಗೈಡ್' ಮಾಸಪತ್ರಿಕೆಯಲ್ಲಿ ಪ್ರಕಟವಾಗಿತ್ತು) ೨೦೧೨ರ ಡಿಸೆಂಬರ್ ೨೧ ರಂದು ಜಗತ್ತಿನ ಅಂತ್ಯವಾಗಲಿದೆ. ಭೂಗ್ರಹವು ಯಾವುದೋ ಒಂದು ರೀತಿಯಲ್ಲಿ ಭಾರೀ ಮಾರ್ಪಾಡಿಗೆ ಒಳಗಾಗಲಿದೆ. ಭೂಮಿಯ ಮೇಲಿನ ಬಹುಪಾಲು ಮನುಷ್ಯರು ನಾಶವಾಗಲಿದ್ದಾರೆ. ಭೂಖಂಡಗಳು ಪ್ರತ್ಯೇಕಗೊಳ್ಳಲಿವೆ, ಇಡೀ ಜಗತ್ತೇ ಅಲ್ಲೋಲ ಕಲ್ಲೋಲವಾಗುತ್ತದೆ. ಆ ದಿನವೇ ಡೂಮ್ಸ್ ಡೇ ೨೦೧೨. ಅದು ಭೂಮಂಡಲದ ಅಂತ್ಯದ ದಿನ..... ಈ ಬಗೆಯ ಊಹಾಪೋಹಗಳು ಈಗಾಗಲೇ ನಮ್ಮ ಇಡೀ ಜಗತ್ತಿನಾದ್ಯಂತ ವ್ಯಾಪಕವಾದ ಪ್ರಚಾರವನ್ನು ಪಡೆದುಕೊಂಡು ಬಿಟ್ಟಿವೆ. ಅದರ ಈ ಕುರಿತ ಸಾವಿರಾರು ಸಂಖ್ಯೆಯ ಅಂತರ್ಜಾಲ ತಾಣಗಳಿಂದ, ಟೀವಿ ಚಾನಲ್‌ಗಳ ಕಾರ್ಯಕ್ರಮಗಳ ಟಿಆರ್‌ಪಿ ಕಾರ್ಯಕ್ರಮಗಳಿಂದ, ಕೆಲವು ಧಾರ್ಮಿಕ ವ್ಯಕ್ತಿಗಳು ಬರೆದಿರುವ ಪುಸ್ತಕಗಳಿಂದ, ಹೀಗೆ ನಾನಾ ಮೂಲಗಳಿಂದ ಈ ತಥಾಕಥಿತ ಪ್ರಳಯದ ಕುರಿತ ವಿಷಯಗಳನ್ನು ಓದಿ, ಕೇಳಿ ಜನರು ತೀವ್ರ ಆತಂಕ, ಕುತೂಹಲಗಳಿಗೊಳಗಾಗಿದ್ದಾರೆ. ಬೆಂಗಳೂರಿನ ಹತ್ತಿರ ಚಿಕ್ಕಗುಬ್ಬಿಯಲ್ಲಿರುವ ಮಾನಸ ಫೌಂಡೇಶನ್ ಸಂಸ್ಥೆಯ ಸಂಸ್ಥಾಪಕರಾಗಿರುವ ಕೃಷ್ಣಾನಂದ ಎಂಬ ಸ್ವಾಮಿ ೨೦೧೨ ನೇ ಇಸವಿಯಲ್ಲಿ ನಡೆಯಬಹುದಾದ ಘಟನೆಗಳನ್ನು ತಮ್ಮ ದಿವ್ಯದರ್ಶನದ ಸಹಾಯದಿಂದ, ೨೦೧೨-ಎಂಡ್ ಆರ್ ಬಿಗಿನಿಂಗ್ ಎಂಬ ಕೃತಿಯನ್ನು ಬರೆದಿದ್ದರು. ಉತ್ತರ ಕನ್ನಡ ಜಿಲ್ಲೆಯ ಜೋಯಿಡ ತಾ...

"ಭೂಮಿ ಮತ್ತು ರಂಗಭೂಮಿ ಎರಡೂ ಅತಂಕದಲ್ಲಿವೆ"- ಚಿದಂಬರರಾವ್ ಜಂಬೆ

ಇಮೇಜ್
ನಾಡಿನ ರಂಗಭೂಮಿಯಲ್ಲಿ ಚಿದಂಬರರಾವ್ ಜಂಬೆಯವರ ಕೊಡುಗೆ ಅಪಾರವಾದದ್ದು. ಹೆಗ್ಗೋಡಿನ ನೀನಾಸಂ, ಮೈಸೂರಿನ ರಂಗಾಯಣ ಮತ್ತು ಸಾಣೆಹಳ್ಳಿಯ ಶಿವಸಂಚಾರ ಈ ಮೂರೂ ಪ್ರಮುಖ ರಂಗಶಾಲೆಗಳಲ್ಲಿ ಅತ್ಯಮೂಲ್ಯ ಕೊಡುಗೆ ನೀಡಿರುವ ರಂಗನಿರ್ದೇಶಕ ಮತ್ತು ಚಿಂತಕ ಚಿದಂಬರರಾವ್ ಜಂಬೆಯವರೊಂದಿಗೆ ನಡೆಸಿದ ಮಾತುಕತೆ ಇಲ್ಲಿದೆ.  (ಚಿತ್ರಗಳು-ಹರ್ಷಕುಮಾರ್ ಕುಗ್ವೆ) ಆಧುನಿಕ ರಂಗಭೂಮಿಯ ಇಂದಿನ ಟ್ರೆಂಡ್ ಏನಾಗಿದೆ? ಈ ’ಆಧುನಿಕತೆ’ ಎನ್ನುವುದನ್ನೇ ಆಲೋಚನೆ ಮಾಡಬೇಕಾಗಿದೆ. ಏಕೆಂದರೆ ಇಂದು ಆಧುನಿಕತೆ ಎಂದು ಕರೆಯುವುದು ಕೇವಲ ತಾಂತ್ರಿಕವಾಗಿಯೇ ವಿನಃ ವಸ್ತುಸಂವಿಧಾನದಲ್ಲಿ ಆದಂತಹ ಬದಲಾವಣೆಗಳನ್ನು ಇಟ್ಟುಕೊಂಡು ನಾವು ಆಧುನಿಕತೆಯನ್ನು ನೋಡುತ್ತಿಲ್ಲ. ಈಗ ತಾಂತ್ರಿಕವಾಗಿ ಅಷ್ಟೇನು ಬದಲಾವಣೆಗಳು ಆಗಿಲ್ಲ ಎಂಬುದು ನನ್ನ ಅಭಿಪ್ರಾಯ. ವಸ್ತು ಸಂವಿಧಾನದಲ್ಲಿ ಕೂಡ ಹೇಳಿಕೊಳ್ಳುವಂತಹಾ ಬಹಳಷ್ಟು ಏನೂ ಬಂದಿಲ್ಲ. ಇಂದು ಆಧುನಿಕ ಅಂದರೆ ಜಾಗತಿಕರಣದ ವೇಗದಲ್ಲಿ ಹೋಗುತ್ತಿರುವುದರಿಂದ ಅದನ್ನೇ ಆಧುನಿಕತೆ ಎನ್ನುವ  ಸ್ಥಿತಿಗೆ ನಾವು ಬಂದು ಬಿಟ್ಟಿದ್ದೇವೆ. ವಾಸ್ತವದಲ್ಲಿ ಅದು ಆಧುನಿಕತೆಯಲ್ಲ. ಅದರ ಹೊರತಾಗಿ ಜಾಗತಿಕರಣವನ್ನು ನಿರಾಕರಣೆ ಮಾಡುವಂತಾದ್ದು ಅಥವಾ ಆ ವೇಗಕ್ಕೆ ಸಿಲುಕಿಕೊಳ್ಳದೇ ಇರುವ ಯಾವುದಾದರೂ ಒಂದು ಮಾರ್ಗವಿದ್ದರೆ  ಅದನ್ನ ನಾವು ಆಧುನಿಕತೆ ಎಂದು ಕರೆಯಬಹುದು. ನಮ್ಮ ಪಾರಂಪರಿಕವಾದ ರಂಗಭೂಮಿಗೂ ಇಂದಿನ ರಂಗಭೂಮಿಗೂ ಭಿನ್ನತೆಗ...

ಕಸದ ವಿಷಚಕ್ರದೊಳಗೆ

ಇಮೇಜ್
ಕೃಪೆ: ದ ಸಂಡೆ ಇಂಡಿಯನ್, ಕನ್ನಡ ಕಳೆದ ಆಗಸ್ಟ್ ೨೩ ರಂದು ಬೆಂಗಳೂರಿನ ಉತ್ತರ ಭಾಗದಲ್ಲಿರುವ ಹೆಸರಘಟ್ಟ ಹೋಬಳಿಯ ಮಾವಳ್ಳಿಪುರದಲ್ಲಿ ಏಕಾಏಕಿ ಸುಮಾರು ೬೦೦ ಪೊಲೀಸರು ಜಮಾಸಿದ್ದರು. ಯಾರೋ ಉಗ್ರಗಾ"ಗಳು ಆ ಹಳ್ಳಿಯಲ್ಲಿ ಅಡಗಿಕೊಂಡಿದ್ದರು ಎಂದಲ್ಲ. ಬದಲಾಗಿ ಹಾಗೆ ಜಮಾಸಿದ್ದ ಪೊಲೀಸರೇ ಎರಡು ದಿನಗಳ ಕಾಲ ಹಳ್ಳಿಯಲ್ಲಿ ಉಗ್ರ ವಾತಾವರಣ ಸೃಷ್ಟಿಸಿಬಿಟ್ಟಿದ್ದರು. ಅಂದು ಬೆಳಿಗ್ಗೆ ಊರಿನ ಮುಖಂಡರಿಗೆ ಕರೆಮಾಡಿದ ಡಿವೈಎಸ್‌ಪಿ ಶ್ರೀಧರ್ ಮಾವಳ್ಳಿಪುರ ಕಸದ ಗುಡ್ಡೆಯ ಬಳಿ ಬರಲು ತಿಳಿಸಿದ್ದರು. ಮಾವಳ್ಳಿಪುರದ ಮೂರು ನಾಲ್ಕು ಜನರು ಅಲ್ಲಿಗೆ ಹೋದೊಡನೆ ಆ ಪೊಲೀಸ್ ಅಧಿಕಾರಿ ಊರಿಗೆ ಬರುವ ಕಸದ ಲಾರಿಗಳನ್ನು ತಡೆಯುವುದೇಕೆ ಎಂದು ಧಮಕಿ ಹಾಕಿದರು. ಆಗ ಊರಿನವರು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಒಂದು ತಿಂಗಳ ಹಿಂದೆಯೇ ಅಲ್ಲಿ ಕಸವನ್ನು ಹಾಕುವುದನ್ನು ನಿಲ್ಲಿಸಲು ತಿಳಿಸಿದೆ ಎಂದು ಆದೇಶ ಪತ್ರ ತೋರಿಸಿದರು. ಆದರೆ ಅದಕ್ಕೆ ಗಮನ ನೀಡದ ಪೊಲೀಸರು ಬಲವಂತವಾಗಿ ಕಸ ತುಂಬಿದ ಲಾರಿಗಳಿಗೆ ಅವಕಾಶ ನೀಡಿದಾಗ ತಕ್ಷಣಕ್ಕೆ 25-30 ಜನರು ನೆರೆದು ಪೊಲೀಸರೊಂದಿಗೆ ಮಾತಿಗಿಳಿದರು. ಇಷ್ಟರಲ್ಲಿ ಏಕಾಏಕಿ ವಾಹನಗಳಲ್ಲಿ ಬಂದ ೬೦೦ ರಷ್ಟು ಪೊಲೀಸರು ಭಯಭೀತ ವಾತಾವರಣವನ್ನೇ ಹುಟ್ಟಿಸಿಬಿಟ್ಟರು.  ಆದರೆ ಕಳೆದೊಂದು ದಶಕದಿಂದಲೂ ಬೆಂಗಳೂರು ಬಿಸಾಡಿ ಕಳಿಸಿದ ಕಸವನ್ನು ಸುರಿಸಿಕೊಂಡು ಇನ್ನಿಲ್ಲದ ತೊಂದರೆಗಳನ್ನನುಭವಿಸಿರುವ ಗ್ರಾಮಸ್ಥರು ಸೋಲೊಪ್ಪಲು ಸಿ...

ವಿಶ್ವದ ಸಕಲ ಸಮಸ್ಯೆಗಳಿಗೂ ಉತ್ತರ ಬುದ್ಧನ ಚಿಂತನೆಯಲ್ಲಿದೆ- ಪ್ರೊ. ಕಾಳೇಗೌಡ ನಾಗವಾರ

ಇಮೇಜ್
ಬಂಡಾಯ ಸಾಹಿತ್ಯದಲ್ಲಿ ಗುರುತಿಸಿಕೊಂಡು ಅತ್ಯಂತ ಮೌಲ್ಯಯುತವಾದ ಸಾಹಿತ್ಯವನ್ನು ರಚಿಸಿರುವ ಪ್ರೊ. ಕಾಳೇಔಡ ನಾಡಿನ ಪ್ರಮುಖ ಸಾಹಿತಿ, ವಿಚಾರವಾದಿ ಮತ್ತು ಹೋರಾಟಗಾರರು. ಟಿಎಸ್‌ಐಗಾಗಿ ಹರ್ಷಕುಮಾರ್ ಕುಗ್ವೆ ಅವರೊಂದಿಗೆ ನಡೆಸಿದ ಸಂದರ್ಶನ ಇಲ್ಲಿದೆ.  ಜಗತ್ತಿನ ಮೊದಲ ಜಾನಪದ ವಿಶ್ವವಿದ್ಯಾಲಯವನ್ನು ಸ್ಥಾಪಿಸಿಕೊಂಡಿರುವ ನಾವು ಜಾನಪದ ಅಧ್ಯಯನದ ವಿಷಯದಲ್ಲಿ ಏನನ್ನು ನಿರೀಕ್ಷಿಸಬಹುದು? ಜಾನಪದ ಅಧ್ಯಯನ ಅನ್ನುವುದು ವಾಸ್ತವವಾಗಿ ಇಡೀ ಜನಸಮುದಾಯದ ಅನುಭವದ ಇತಿಹಾಸವನ್ನೇ ಹೇಳುತ್ತದೆ. ಅಲ್ಲಿ ಅಪರೂಪದ ಪ್ರಯೋಗಗಳಿವೆ; ಅಲ್ಲಿ ವ್ಯಕ್ತಿಗಿಂತ ಹೆಚ್ಚಾಗಿ ಸಮುದಾಯದ ಅನುಭವಗಳಿರುತ್ತವೆ. ನಮ್ಮ ಸಾಂಸ್ಕೃತಿಕ ಇತಿಹಾಸ, ಆಚರಣೆ, ಸಂಗೀತ ಇತ್ಯಾದಿ ಸಕಲ ವೈವಿಧ್ಯಗಳ ಆಗರವೇ ಜಾನಪದ. ಹೀಗಾಗಿಯೇ ಆಯಾಯಾ ದೇಶಗಳಲ್ಲಿ ವಿವಿಧ ಕಾಲಮಾನ, ಹವಾಗುಣಕ್ಕನುಗುಣವಾಗಿ, ಆಹಾರ ಪದ್ಧತಿ, ನಡೆನುಡಿ ವಿಚಾರಗಳಲ್ಲಿ ಪ್ರಯೋಗಶೀಲವಾಗಿ ಯಾವುದು ಹೆಚ್ಚು ಅರ್ಥಪೂರ್ಣ ಎಂದು ಮನುಷ್ಯ ಸದಾ ಹುಡುಕುತ್ತಿರುತ್ತಾನೆ. ಅದು ಅಕ್ಷರಸ್ತರ ಲೋಕಕ್ಕಿಂತ ಭಿನ್ನವಾದ ಪ್ರಾಮಾಣಿಕವಾದ ಅನುಭವ ಲೋಕ. ಆ ದೃಷ್ಟಿಯಿಂದ ಆಯಾ ದೇಶಗಳಲ್ಲಿ ತಜ್ಞರಾದವರು ಆ ಸಮಾಜವನ್ನು ಅರ್ಥಮಾಡಿಕೊಳ್ಳಲಿಕ್ಕಾಗಿ, ಜಾನಪದವನ್ನು ಜ್ಞಾನದ ಕಾರಣಕ್ಕಾಗಿ ಅಧ್ಯಯನಮಾಡುತ್ತಾರೆ. ಹಾಗೆಯೇ ನಮ್ಮ ಭಾರತದ ಸಂದರ್ಭದಲ್ಲಿ ಅಕ್ಷರಜ್ಞಾನ ಇರದಿದ್ದಾಗಲೂ ಸಮಾಜದ ಏಳಿಗೆಯನ್ನು ನಿರಂತರವಾಗಿ ಬಯಸುತ್ತಿದ್ದ ದೊಡ್ಡ...